ಬೆಂಗಳೂರು, ಫೆ. 28: ರಾಜ್ಯದಲ್ಲಿ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣ ಸಂಸ್ಢೆಗಳಲ್ಲಿ ಖಾಲಿಯಾಗಿರುವ ಹುದ್ದೆಗಳನ್ನು ತುಂಬಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ಶಿಕ್ಷಣ ಸಚಿವ ಸುರೇಶ್ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಶಿಕ್ಷಣ ಇಲಾಖೆ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪಗೆ ಧನ್ಯವಾದ ಅರ್ಪಿಸಿರುವ ಅವರು, ಅನುದಾನಿತ ಶಾಲೆಗಳಲ್ಲಿ ಈಗಾಗಲೇ ಸರಕಾರದಿಂದ ಅನುಮೋದನೆಗೊಂಡು ನೇಮಕಾತಿ ಪ್ರಕ್ರಿಯೆಯು ಇಲಾಖೆ ಹಂತದಲ್ಲಿ ಬಾಕಿಯಿರುವ 173 ಬೋಧಕ ಹುದ್ದೆಗಳು ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಸಂಬಂಧಿಸಿದ 257ಬೋಧಕ ಹುದ್ದೆಗಳಿಗೆ ನೇಮಕಾತಿ ಆದೇಶವನ್ನು 2021-22ನೇ ಶೈಕ್ಷಣಿಕ ವರ್ಷ ಪ್ರಾರಂಭಗೊಂಡ ನಂತರ ನೀಡಲು ಆರ್ಥಿಕ ಇಲಾಖೆ ಅನುಮತಿ ನಿಡಿದೆ ಎಂದು ತಿಳಿಸಿದ್ದಾರೆ.
1 komentar:
Write komentarPlease fill up the vacancies even in sanskrit schools and colleges affiliated to Karnataka Samskrit University, Bangalore.
ReplyEmoticonEmoticon