'ಉದ್ಯೋಗಾಕಾಂಕ್ಷಿ'ಗಳಿಗೆ ಗುಡ್ ನ್ಯೂಸ್ : 'ನೇರ ನೇಮಕಾತಿ ಹುದ್ದೆ'ಗಳ ಭರ್ತಿಗೆ 'ರಾಜ್ಯ ಸರ್ಕಾರ' ಗ್ರೀನ್ ಸಿಗ್ನಲ್

February 03, 2021

 


ಬೆಂಗಳೂರು : ದಿನಾಂಕ 06-07-2020ರಂದು ರಾಜ್ಯದಲ್ಲಿ ಕೋವಿಡ್-19ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ 2020-21ನೇ ಸಾಲಿನ ಎಲ್ಲಾ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ ಹಿಡಿಯಲಾಗಿತ್ತು. ಆದ್ರೇ ಇದೀಗ ದಿನಾಂಕ 06-07-2020ರ ಸುತ್ತೋಲೆಯಿಂದ ವಿನಾಯಿತಿ ನೀಡಿದ್ದು, ಕೆಲವು ಇಲಾಖೆಗಳಿಗೆ ನೇಮಕಾತಿಗಾಗಿ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ(ಆ&ಸಂ) ಡಾ.ಏಕ್ ರೂಪ್ ಕೌರ್, ದಿನಾಂಕ 06-07-2020ರಲ್ಲಿ ರಾಜ್ಯದಲ್ಲಿ ಕೋವಿಡ್-19ನಿಂದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಸಂಪನ್ಮೂಲವನ್ನು ಕ್ರೂಢೀಕರಿಸಲು 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿತ್ತು.

ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ದಿನಾಂಕ 06-07-2020ರ ಸುತ್ತೋಲೆಯಿಂದ ವಿನಾಯಿತಿ ನೀಡುವಂತೆ ಕೋರಿ ಹಲವಾರು ಇಲಾಖೆಗಳಿಂದ ಪ್ರಸ್ತಾವನೆಗಳನ್ನು ಸ್ವೀಕೃತಗೊಂಡ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ನೇಮಕಾತಿ ಪೂರ್ವ ಪ್ರಕ್ರಿಯೆಗಳನ್ನು ಮುಂದುವರೆಸಲು ಕೆಲವು ಇಲಾಖೆಗಳಿಗೆ ಸಹಮತಿ ನೀಡಲಾಗಿದೆ.

ಮುಂದುವರೆದು ದಿನಾಂಕ 12-01-2021ರ ಸುತ್ತೋಲೆಯಲ್ಲಿ ಅನುಕಂಪನದ ಆಧಾರದ ಮೇಲೆ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ಕೆಲವು ಷರತ್ತುಗಳಿಗೆ ಒಳಪಟ್ಟು ನೇಮಕಾತಿ ಆದೇಶ ನೀಡಲು ಸಹಮತಿ ನೀಡಲಾಗಿದೆ.

ಇದೇ ರೀತಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ವಿವಿಧ ಇಲಾಖೆಗಳಿಗೆ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಆದೇಶ ನೀಡಲು ಅನುಮತಿ ಕೋರಿರುವ ವಿವಿಧ ಇಲಾಖೆಗಳಿಂದ ಪ್ರಸ್ತಾವನೆಗಳು ಸ್ವೀಕೃತಗೊಂಡಿರುತ್ತವೆ.

ಈ ಹಿನ್ನಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ವಿವಿಧ ಇಲಾಖೆಗಳಿಗೆ ಪ್ರಥಮ ದರ್ಜೆ ಸಹಾಯಕ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನೇಮಕಾತಿ ಪೂರ್ವ ಪ್ರಕ್ರಿಯೆಗಳನ್ನು ಮುಂದುವರೆಸಲು ಸಹಮತಿ ನೀಡಿದೆ.

ಮುಂದುವರೆದು, ನೇಮಕಾತಿ ಪೂರ್ವ ಪ್ರಕ್ರಿಯೆಗಳನ್ನು ಮುಕ್ತಾಯಗೊಂಡ ನಂತ್ರ, ಆರ್ಥಿಕ ಇಲಾಖೆಯ ಗಮನಕ್ಕೆ ತಂದು ಅಭ್ಯರ್ಥಿಗಳಿಗೆ ದಿನಾಂಕ 01-06-2021ರ ನಂತರ ನೇಮಕಾತಿ ಆದೇಶ ನೀಡಲು ಸಹ ಸಹಮತಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.Related Articles

Advertisement
Previous
Next Post »