ರಾಯಚೂರು: ಯುವ ಪ್ರೇಮಿಗಳಿಬ್ಬರು ಸಾರ್ವಜನಿಕ ಸ್ಥಳದಲ್ಲೇ ಪರಸ್ಪರ ಚುಂಬನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಬಸ್ಗಾಗಿ ಕಾಯುತ್ತಿದ್ದಾರೆ. ಆದರೆ ಯುವಕ, ಯುವತಿ ಒಬ್ಬರನೊಬ್ಬರು ಪರಸ್ಪರ ತಬ್ಬಿಕೊಂಡು, ಸಾರ್ವಜನಿಕವಾಗಿ ಲಿಪ್ ಲಾಕ್ ಮಾಡುವ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ.
ಈ ಜೋಡಿಯ ಚುಂಬನದ ದೃಶ್ಯವನ್ನು ಪ್ರಯಾಣಿಕರೊಬ್ಬರು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಇನ್ನು ಮಂಡ್ಯದ ಕೆ.ಆರ್.ಪೇಟೆ ಬಸ್ ನಿಲ್ದಾಣದಲ್ಲಿ ಪ್ರೇಮಿಗಳ ದಿನದಂದು ಪ್ರೇಮಿಗಳಿಬ್ಬರು ಕಿಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಇದರ ಬೆನ್ನಲೇ ಇದೀಗ ಮತ್ತೊಂದು ಚುಂಬನದ ವಿಡಿಯೋ ವೈರಲ್ ಆಗಿದೆ.
EmoticonEmoticon