ಪಿಸ್ತೂಲು ಹೇಗೆ ವರ್ಕ್​ ಆಗುತ್ತದೆಯೆಂದು ನೋಡಲು ಸೋದರಳಿಯನಿಗೇ ಗುಂಡಿಟ್ಟ ಮಾವ! ವಿಡಿಯೋ ವೈರಲ್

February 27, 2021
Saturday, February 27, 2021

 


ಲಖನೌ: ಕೆಲವು ವಸ್ತುಗಳೊಂದಿಗೆ ಹುಡುಗಾಟ ಸಲ್ಲ ಎಂದು ಹೇಳುತ್ತಾರೆ. ಆದರೆ ಆ ಮಾತನ್ನು ಪರಿಗಣಿಸದೆಯೇ ಪಿಸ್ತೂಲಿನೊಂದಿಗೆ ಹುಡುಗಾಟ ಮಾಡಲು ಹೋದ ವ್ಯಕ್ತಿಯೊಬ್ಬ ತನ್ನ ಸೋದರ ಅಳಿಯನಿಗೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್​ನಗರದಲ್ಲಿ ನಡೆದಿದೆ.

ಎರಡು ಮೂರು ಜನರು ಗದ್ದೆ ಭಾಗದಲ್ಲಿ ಕುಳಿತುಕೊಂಡು ಮದ್ಯ ಸೇವಿಸುತ್ತಿದ್ದರು. ಈ ವೇಳೆ ಅವರ ಬಳಿ ಇದ್ದ ಕಂಟ್ರಿ ಮೇಡ್ ಪಿಸ್ತೂಲನ್ನೂ ಹೊರತೆಗೆದಿದ್ದಾರೆ. ಈ ಎಲ್ಲ ದೃಶ್ಯಗಳನ್ನು ಒಬ್ಬ ತನ್ನ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾನೆ. ಪಿಸ್ತೂಲು ಹೊರತೆಗೆದ ವ್ಯಕ್ತಿ ಅದಕ್ಕೆ ಬುಲೆಟ್​ ಹಾಕಿ ಅದನ್ನು ವಿಡಿಯೋ ಮಾಡುತ್ತಿದ್ದವನತ್ತ ಗುರಿ ಮಾಡಿ ತಕ್ಷಣ ಶೂಟ್​ ಮಾಡಿಬಿಟ್ಟಿದ್ದಾನೆ. ವಿಡಿಯೋ ಮಾಡುತ್ತಿದ್ದ ವ್ಯಕ್ತಿ ಅಲ್ಲೇ ಕುಸಿದುಬಿದ್ದಿದ್ದಾನೆ.

ಶೂಟ್​ ಮಾಡಿದವ ಮತ್ತು ಮೃತನಾದ ವ್ಯಕ್ತಿ ಸೋದರ ಮಾವ ಅಳಿಯ ಸಂಬಂಧಿಗಳು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಪ್ರಕರಣದಲ್ಲಿ ಶೂಟ್ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಬೇಕೆಂದು ಮಾಡದ ಕೃತ್ಯವೆನ್ನುವುದು ವಿಚಾರಣೆ ವೇಳೆ ಹೊರಬಿದ್ದಿದೆ. (ಏಜೆನ್ಸೀಸ್​)

ವೀಡಿಯೋ ಪೂರ್ತಿ ನೋಡಿ 

https://twitter.com/VVani4U/status/1365607665091584000?ref_src=twsrc%5Etfw%7Ctwcamp%5Etweetembed%7Ctwterm%5E1365607665091584000%7Ctwgr%5E%7Ctwcon%5Es1_c10&ref_url=http%3A%2F%2Fapi-news.dailyhunt.in%2F

Thanks for reading ಪಿಸ್ತೂಲು ಹೇಗೆ ವರ್ಕ್​ ಆಗುತ್ತದೆಯೆಂದು ನೋಡಲು ಸೋದರಳಿಯನಿಗೇ ಗುಂಡಿಟ್ಟ ಮಾವ! ವಿಡಿಯೋ ವೈರಲ್ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಪಿಸ್ತೂಲು ಹೇಗೆ ವರ್ಕ್​ ಆಗುತ್ತದೆಯೆಂದು ನೋಡಲು ಸೋದರಳಿಯನಿಗೇ ಗುಂಡಿಟ್ಟ ಮಾವ! ವಿಡಿಯೋ ವೈರಲ್

Post a Comment