ಪ್ರಾಥಮಿಕ ಶಾಲೆ ಪ್ರಾರಂಭಿಸಲು ಮನವಿ

February 07, 2021


 ಗುಡಿಬಂಡೆ: 1ರಿಂದ 5ನೇ ತರಗತಿವರೆಗೆ ಶಾಲೆ ಪ್ರಾರಂಭಿಸಬೇಕು. ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇಕಡ 30ರಷ್ಟು ಶುಲ್ಕ ಕಡಿತ ಮಾಡಿರುವುದರಿಂದ ಗ್ರಾಮೀಣ ಖಾಸಗಿ ಶಾಲೆಗಳಿಗೆ ಅರ್ಥಿಕವಾಗಿ ಹಿನ್ನಡೆಯಾಗಿದೆ. ಕೂಡಲೇ, ಈ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ತಾಲ್ಲೂಕು ಖಾಸಗಿ ಶಾಲೆಗಳ ಒಕ್ಕೂಟದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ವೆಂಕಟೇಶಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲ್ಲೂಕು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ರಾಮಾಂಜನೇಯ ಮಾತನಾಡಿ, ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಸರ್ಕಾರ ಶೇಕಡ 30ರಷ್ಟು ಶುಲ್ಕ ಕಡಿತ ಮಾಡಿದೆ. ಇದರಿಂದ ಗ್ರಾಮೀಣ ಭಾಗದ ಶಾಲೆಗಳಿಗೆ ಹೊಡೆತ ಬಿದ್ದಿದೆ. ರಾಜ್ಯ ಸರ್ಕಾರ ಕೂಡಲೇ ಶುಲ್ಕ ಕಡಿತ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಸುಮಾರು ಒಂಬತ್ತು ತಿಂಗಳ ಕಾಲ ಶಾಲೆಗಳನ್ನು ಮುಚ್ಚಲಾಗಿತ್ತು.

ಇದರಿಂದ ಖಾಸಗಿ ಶಾಲೆಗಳ ಅಡಳಿತದಲ್ಲಿ ಆರ್ಥಿಕವಾಗಿ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರ ಎಲ್ಲಾ ಕ್ಷೇತ್ರಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ಆಯಾ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಟ್ಟಿದೆ. ರಾಜ್ಯ ಸರ್ಕಾರ 1ರಿಂದ 5ನೇ ತರಗತಿ ಪ್ರಾರಂಭಿಸಲು ಅನುಮತಿ ನೀಡಿಲ್ಲ. ನೆರೆಯ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಪ್ರಾಥಮಿಕ ಶಾಲೆ ಪ್ರಾರಂಭಿಸಲು ಅನುಮತಿ ನೀಡಿದ್ದಾರೆ. ಅದೇರೀತಿ ರಾಜ್ಯದಲ್ಲೂ ಅನುಮತಿ ನೀಡಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ಕಾರ್ಯದರ್ಶಿ ಡಿ.ಆರ್. ನಿರಂಜನ್ ಮಾತನಾಡಿದರು.

ಖಾಸಗಿ ಶಾಲೆಗಳ ಒಕ್ಕೂಟದ ಖಜಾಂಚಿ ವಿ. ವೆಂಕಟೇಶ್, ಸದಸ್ಯರಾದ ಡಿ.ಎಲ್. ಪರಿಮಳಾ, ವಿ. ಪ್ರದೀಪ್ ಇದ್ದರು.


Related Articles

Advertisement
Previous
Next Post »