ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಕ್ರಮ ಖಂಡನೀಯ: ಸಚಿವ ಅರವಿಂದ ಲಿಂಬಾವಳಿ

February 04, 2021
Thursday, February 4, 2021

 


ಬೆಂಗಳೂರು: ಹಿರಿಯ ಸಾಹಿತಿ ಕೆ.ಎಸ್ ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಘಟನೆ ಖಂಡನೀಯ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಕೋರ್ಟ್ ಆವರಣದಲ್ಲಿಯೇ ವಕೀಲೆಯೊಬ್ಬರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಇದು ದುರಾದೃಷ್ಟಕರ ಘಟನೆ, ತಾತ್ವಿಕ ಭಿನ್ನಾಭಿಪ್ರಾಯಗಳು ದೈಹಿಕ ಹಲ್ಲೆ, ದೈಹಿಕ ಹಿಂಸೆ ರೂಪ ತಾಳಬಾರದು. ಇಂತಹ ಕೃತ್ಯಗಳನ್ನು ನಾನು ಖಂಡಿಸುತ್ತೇನೆ. ಮಸಿ ಬಳಿಯವುದು ಕನ್ನಡದ ಸಂಸ್ಕೃತಿ ಅಲ್ಲಎಂದು ಹೇಳಿದರು.

ಘಟನೆಯ ಹಿನ್ನೆಲೆ;

ಪ್ರಕರಣವೊಂದರ ವಿಚಾರಣೆಗೆಂದು ಭಗವಾನ್ ಅವರು ಇಂದು ನಗರದ ಎರಡನೇ ಎಸಿಎಂಎಂ ನ್ಯಾಯಾಲಯಕ್ಕೆ ಆಗಮಿಸಿದ್ದರು.

ವಿಚಾರಣೆ ಬಳಿಕ ಹೊರಬಂದಾಗ ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದಾರೆ. ಸದ್ಯ ಘಟನೆಯ ಕುರಿತು ಸಾಹಿತಿ ಭಗವಾನ್ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.


Thanks for reading ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಕ್ರಮ ಖಂಡನೀಯ: ಸಚಿವ ಅರವಿಂದ ಲಿಂಬಾವಳಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಕ್ರಮ ಖಂಡನೀಯ: ಸಚಿವ ಅರವಿಂದ ಲಿಂಬಾವಳಿ

Post a Comment