GOODNEWS: 3473 ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಇಲ್ಲಿದೆ ಮಾಹಿತಿ

February 12, 2021

 


ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯದಾದ್ಯಂತದ ಅಗತ್ಯವಿರುವ 3473 ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಯಾ ಜಿಲ್ಲೆ ಹಾಗೂ ತಾಲೂಕೂ ಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಫೆಬ್ರವರಿ-2021 ರಿಂದ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳುವ ತನಕ ಅಥವಾ ಮೇ-2021 ರವರೆಗೆ ಅಥವಾ 2020-21ನೇ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಸದರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅಂತ ಅಧಿಸೂಚನೆಯಲ್ಲಿ ಉಲ್ಲೇಖ ಮಾಡಲಾಗಿದೆ.

ವಿದ್ಯಾರ್ಹತೆ : ಪದವಿ ಜತೆಗೆ, ಬಿ,ಇಡಿ ಪಾಸ್‌ ಮಾಡಿರಬೇಕು. ಟಿಇಟಿ ಪಾಸ್‌ ಮಾಡಿದ ಅಭ್ಯರ್ಥಿಗಳಿಗೆ ಹಾಗೂ ಈಗಾಗಲೇ ಪಾಠ ಮಾಡಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುತ್ತದೆ. ಪ್ರೌಢಶಾಲಾ ಅತಿಥಿ ಶಿಕ್ಷಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಸಂಭಾವನೆ ರೂ.8000 ನೀಡಲಾಗುವುದು ಅಂತ ತಿಳಿಸಿದೆ. ಮಾಹಿತಿಯನ್ನು ಈ ಕೆಳಕಂಡತಿದೆ
Related Articles

Advertisement
Previous
Next Post »