`RTE' ಪ್ರವೇಶ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

February 09, 2021
Tuesday, February 9, 2021

 


ಬೆಂಗಳೂರು : 2021-22 ನೇ ಸಾಲಿನ ಶಿಕ್ಷಣ ಹಕ್ಕು ಕಾಯಿದೆ (ಆರ್ ಟಿಇ) ಪ್ರವೇಶ ಪ್ರಕ್ರಿಯೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಚಾಲನೆ ನೀಡಿದ್ದು, ಈ ಬಗ್ಗೆ ವೇಳಾಪಟ್ಟಿ ಬಿಡುಗಡೆ ಮಾಡಿ ಸುತ್ತೋಲೆ ಹೊರಡಿಸಿದೆ.

ಶಿಕ್ಷಣ ಹಕ್ಕು ಕಾಯಿದೆ ಪ್ರವೇಶ ಪ್ರಕ್ರಿಯೆ ಫೆಬ್ರವರಿ 8 ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ಆನ್ ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟುಉ ಹಂಚಿಕೆ ಪ್ರಕ್ರಿಯೆ ಏಪ್ರಿಲ್ 26 ರಿಂದ ಆರಂಭವಾಗಲಿದೆ. ಏಪ್ರಿಲ್ 27 ರಿಂದ ಮೇ 10 ರವರೆಗೆ ಶಾಲೆಗಳಲ್ಲಿ ದಾಖಲಾತಿ ಪ್ರಕ್ರಿಯೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಏಪ್ರಿಲ್ 19 ಕ್ಕೆ ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಏಪ್ರಿಲ್ 27 ರಿಂದ ಮೇ. 10 ರವರೆಗೆ ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್ ಲೋಡ್ ಮಾಡಲಾಗುವುದು. ಮೇ. 17 ರಂದು ಆನ್ ಲೈನ್ ಮೂಲಕ 2 ನೇ ಸುತ್ತಿನ ಸೀಟು ಹಂಚಿಕೆ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.


Thanks for reading `RTE' ಪ್ರವೇಶ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on `RTE' ಪ್ರವೇಶ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

Post a Comment