ಬೆಳಗಾವಿ: ಕಳೆದ ವರ್ಷ ಕೊರೊನಾದಿಂದಾಗಿ ಶಾಲಾ ವಾರ್ಷಿಕ ಅವಧಿಯಲ್ಲಿ ಕಡಿತವಾಗಿದ್ದು, ಈ ಬಾರಿ ಬೇಸಿಗೆ ರಜೆ ಕಡಿತ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್(S Suresh Kumar), ಮುಂಬರುವ ಬೇಸಿಗೆ ರಜೆ ದಿನಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.
ಕೊರೊನಾ( Corona) ಭೀತಿಯ ಹಿನ್ನೆಲೆಯಲ್ಲಿ ಸಕಾಲಕ್ಕೆ ಶಾಲಾ, ಕಾಲೇಜು ಪ್ರಾರಂಭ ಮಾಡದ ಹಿನ್ನೆಲೆಯಲ್ಲಿ ಶಿಕ್ಷಣದಿಂದ ಮಕ್ಕಳು ದೂರ ಸರಿಯುತ್ತಿದ್ದಾರೆ.
ಅಲ್ಲದೆ ಬಾಲ್ಯ ವಿವಾಹದ ಸಂಖ್ಯೆಯು ಹೆಚ್ಚಳವಾಗಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
EmoticonEmoticon