UAS Dharwad Recruitment 2021: ಶಿಕ್ಷಕರ ಹುದ್ದೆಗೆ ಫೆ.22ಕ್ಕೆ ನೇರ ಸಂದರ್ಶನ

February 13, 2021

 


ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಜೈವಿಕ ತಂತ್ರಜ್ಞಾನ ವಿಬಾಗದಲ್ಲಿ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆಬ್ರವರಿ 22,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಿದ್ಯಾರ್ಹತೆ:

ಬಯೋಟೆಕ್ನಾಲಜಿ/ಮಾಲಿಕ್ಯುಲರ್ ಬಯೋಲಜಿ ಮತ್ತು ಬಯೋಟೆಕ್ನಾಲಜಿ ಯಲ್ಲಿ ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನ:

ಶಿಕ್ಷಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.uasd.edu/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಫೆಬ್ರವರಿ 22,2021ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಚೇರಿ ವಿಳಾಸ:

ಡೀನ್ (ಕೃಷಿ),

ಕೃಷಿ ಮಹಾವಿದ್ಯಾಲಯ,

ಧಾರವಾಡ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.


Related Articles

Advertisement
Previous
Next Post »