ದಕ್ಷಿಣ ಕನ್ನಡ : ರಾಜ್ಯದಲ್ಲಿ 8 ರಿಂದ ಪದವಿಯವರೆಗೆ ತರಗತಿಗಳು ಕೊರೋನಾ ಸೋಂಕಿನ ಮಧ್ಯೆ ಆರಂಭಗೊಂಡಿವೆ. ಆದ್ರೇ 1 ರಿಂದ 6ನೇ ತರಗತಿ ಶಾಲೆಗಳು ಯಾವಾಗ ಆರಂಭಗೊಳ್ಳಲಿವೆ ಎನ್ನುವ ಕುರಿತಂತೆ ಪ್ರತಿಕ್ರಿಯಿಸಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಪಡೆದು ಸದ್ಯದಲ್ಲೇ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತಂತೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊರೋನಾ ಸೋಂಕಿನ ಭೀತಿ ಇರದಿದ್ದರೇ, ಮಾರ್ಚ್.1ರಿಂದಲೇ ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭವಾಗಬೇಕಿತ್ತು.
ಆದ್ರೇ ಕೊರೋನಾ ಕಾರಣದಿಂದಾಗಿ ಎಲ್ಲಾ ತರಗತಿಗಳ ಶೈಕ್ಷಣಿಕ ಚಟುವಟಿಕೆ ಆರಂಭಗೊಂಡಿಲ್ಲ ಎಂದರು.
ರಾಜ್ಯದಲ್ಲಿ ಇದುವರೆಗೆ 350 ಆಸುಪಾಸಿನಲ್ಲಿದ್ದಂತ ಕೊರೋನಾ ಸೋಂಕಿನ ಸಂಖ್ಯೆ ನಿನ್ನೆಯಿಂದ 600ಕ್ಕೂ ಹೆಚ್ಚು ಆಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭ ಸಂದರ್ಭದಲ್ಲೂ ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಪಡೆಯಲಾಗಿತ್ತು. ಈಗ ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ಕಾರಣದಿಂದಾಗಿ ಸದ್ಯಕ್ಕೆ 1 ರಿಂದ 6ನೇ ತರಗತಿ ಆರಂಭದ ನಿರ್ಧಾರವನ್ನು ಕೈಬಿಡಲಾಗಿದೆ. ಆದ್ರೇ ಆರೋಗ್ಯ ಸಲಹಾ ಸಮಿತಿ ಒಪ್ಪಿಗೆ ಬಳಿಕವೇ ತರಗತಿ ಆರಂಭದ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.
EmoticonEmoticon