ಕೊರೊನಾ 2ನೇ ಅಲೆ: ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭಿಸದಿರಲು ತೀರ್ಮಾನ

March 02, 2021
Tuesday, March 2, 2021

 


ದೇಶದಲ್ಲಿ ಆರಂಭವಾಗಿರುವ ಕೊರೊನಾ ಎರಡನೇ ಅಲೆ ಆತಂಕ ಮೂಡಿಸಿದೆ. ಈ ಮೊದಲು ಕೊರೊನಾ ಇಳಿಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲಾ - ಕಾಲೇಜುಗಳನ್ನು ಆರಂಭಿಸಲಾಗಿತ್ತು. ಜೊತೆಗೆ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಸಹ ಆರಂಭಿಸಲು ದಿನಾಂಕ ನಿಗದಿ ಮಾಡಲಾಗಿತ್ತು.

ಮಾರ್ಚ್ 1ರಿಂದ ಒಂದರಿಂದ 5ನೇ ತರಗತಿವರೆಗಿನ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ತೀರ್ಮಾನ ಕೈಗೊಂಡಿದ್ದ ಸರ್ಕಾರ ಈಗ ತನ್ನ ನಿರ್ಧಾರವನ್ನು ಬದಲಿಸಿದೆ. ನೆರೆಯ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ.

ಇದರ ಮಧ್ಯೆ ಕೆಲವು ಖಾಸಗಿ ಶಾಲೆಗಳು ಆರಂಭವಾಗಿವೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹುಬ್ಬಳ್ಳಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಅಲ್ಲದೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆಯ ತಜ್ಞರ ವರದಿ ಕೇಳಲಾಗಿದ್ದು, ವರದಿ ಬಂದ ಬಳಿಕವೇ ಶಾಲೆ ಆರಂಭದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.


Thanks for reading ಕೊರೊನಾ 2ನೇ ಅಲೆ: ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭಿಸದಿರಲು ತೀರ್ಮಾನ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಕೊರೊನಾ 2ನೇ ಅಲೆ: ಸದ್ಯಕ್ಕೆ ಪ್ರಾಥಮಿಕ ಶಾಲೆ ಆರಂಭಿಸದಿರಲು ತೀರ್ಮಾನ

Post a Comment