'ಶಿಕ್ಷಕರ ಹುದ್ದೆ'ಯ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ರಾಜ್ಯದ 'ಸರ್ಕಾರಿ ಶಾಲೆ'ಗಳಲ್ಲಿ ಖಾಲಿ ಇರುವ '3590 ಶಿಕ್ಷಕರ ಹುದ್ದೆ'ಗಳಿಗೆ ಅರ್ಜಿ

March 20, 2021

 ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವಂತ 3590 ಶಿಕ್ಷಕರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿಕೊಳ್ಳಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.ವಿಧಾನಸಭೆಯಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಅವರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 3590 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆ ಅನುಮತಿ ನೀಡಿದ ಬಳಿಕ, ಶೀಘ್ರವೇ 3590 ಶಿಕ್ಷಕರ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುತ್ತದೆ ಎಂದರು.

ಶಿಕ್ಷಕರೊಬ್ಬರಿಗೆ ಕೋವಿಡ್ ದೃಢ; ತಾತ್ಕಾಲಿಕವಾಗಿ ಶಾಲೆಗೆ ರಜೆ ಘೋಷಣೆಹನೂರು (ಚಾಮರಾಜನಗರ): ತಾಲ್ಲೂಕಿನ ಮಾರ್ಟಳ್ಳಿಯ ಸೇಂಟ್ ಮೇರಿಸ್ ತಮಿಳು ಮಾಧ್ಯಮದ ಶಿಕ್ಷಕರೊಬ್ಬರಿಗೆ ಕೋವಿಡ್ ದೃಢಪಟ್ಟಿರುವುದರಿಂದ ತಾತ್ಕಾಲಿಕವಾಗಿ ಶಾಲೆಗೆ ರಜೆ ಘೋಷಿಸಲಾಗಿದೆ.

ನಾಲ್ಕೈದು ದಿನಗಳ ಹಿಂದೆ ವೃದ್ಧೆಯೊಬ್ಬರು ಇವರ ಮನೆಗೆ ತಮಿಳುನಾಡಿನಿಂದ ಬಂದಿದ್ದರು. ಅವರಿಂದ ಸೋಂಕು ತಗುಲಿರಬಹುದು ಎಂದು ಆರೋಗ್ಯಾಧಿಕಾರಿಗಳು ಅಂದಾಜಿಸಿದ್ದಾರೆ.

ವಿದ್ಯಾರ್ಥಿಗೆ ಸೋಂಕು ತಗುಲಿಲ್ಲ: ಕಾಲೇಜಿನ ವಿದ್ಯಾರ್ಥಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದ್ದು, ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ‌ ಹರಡಿದೆ. ಆದರೆ ಇದು ಸುಳ್ಳು ಎಂದು ಪ್ರಾಂಶುಪಾಲರು ಹೇಳಿದ್ದಾರೆ.

'ನಮ್ಮ ಕಾಲೇಜಿನ ಯಾವುದೇ ವಿದ್ಯಾರ್ಥಿಗೂ ಸೋಂಕು ದೃಢಪಟ್ಟಿಲ್ಲ' ಎಂದು ಕಾಲೇಜಿನ ಉಪನ್ಯಾಸಕ ರಾಬರ್ಟ್ ಧನರಾಜ್ ಪ್ರಜಾವಾಣಿಗೆ ತಿಳಿಸಿದರು.

'ಎರಡು ದಿನಗಳ ಹಿಂದೆ ಶಿಕ್ಷಕರ ಗಂಟಲು ದ್ರವವನ್ನು ಪರೀಕ್ಷೆಗೆ ಸಂಗ್ರಹಿಸಿದ್ದೆವು. ಅವುಗಳ ವರದಿ ಬಂದ ಮೇಲೆ ಶಿಕ್ಷಕರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ವಿದ್ಯಾರ್ಥಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಇಲ್ಲ. ಶಿಕ್ಷಕರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷೆ ಮಾಡುತ್ತಿದ್ದೇವೆ' ಎಂದು ಮಾರ್ಟಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ ಅವರು ಪ್ರಜಾವಾಣಿಗೆ ತಿಳಿಸಿದರು.Related Articles

Advertisement
Previous
Next Post »