ಪ್ರತಿಯೊಂದು ಪೂಜೆ ಪುನಸ್ಕಾರಗಳಲ್ಲಿ ಶುದ್ಧತೆಯ ಸಂಕೇತವಾಗಿ ತುಳಸಿಯನ್ನು ಹೆಚ್ಚಾಗಿಯೇ ಬಳಸುತ್ತಾರೆ. ತುಳಸಿ ಪ್ರಾರ್ಥಿಸುವುದರಿಂದ ಎಲ್ಲಾ ಕಾಯಿಲೆಗಳು ಹೇಳಹೆಸರಿಲ್ಲದಂತೆ ಮಾಯವಾಗಿ ನೆಮ್ಮದಿ ಸಿಗುತ್ತದೆ ಹಾಗೆಯೇ ಒಮ್ಮೆ ತುಳಸಿಯನ್ನು ನೀರಿನಿಂದ ತೋಯಿಸಿದರೆ ಯಮರಾಜನ ಭಯವು ಮರೆಯಾಗುತ್ತದೆ ಎಂದು ಸ್ಕಂದ ಪುರಾಣವು ಹೇಳುತ್ತದೆ.
ತುಳಸಿ ಸಾಮಾನ್ಯ ಎಲ್ಲರ ಮನೆಯಲ್ಲೂ ಬೆಳೆಯುವ ದೈವಿಕ ಸಸ್ಯ. ತುಳಸಿ ಧಾರ್ಮಿಕವಾಗಿ ಮಾತ್ರ ಹೆಸರುಗಳಿಸಿಲ್ಲ, ಅದರಲ್ಲಿ ಹಲವು ಔಷಧೀಯ ಗುಣಗಳೂ ಇದೆ. ಆದರೆ ಈ ಅಂಶ ತುಳಸಿ ಬೆಳೆಸಿದ ಎಷ್ಟೋ ಜನರಿಗೂ ತಿಳಿದಿರುವುದಿಲ್ಲ. ಇದರ ಎಲೆಯ ಗಂಧವೇ ವಾತಾವರಣವನ್ನು ತಂಪು ಮತ್ತು ಕಲ್ಮಶರಹಿತವಾಗಿಸುವ ಶಕ್ತಿ ಹೊಂದಿದೆ.
ಪ್ರತಿದಿನ ಬೆಳ್ಳಿಗ್ಗೆ 5 ತುಳಸಿ ಎಲೆಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ 50 ಕ್ಕೂ ಹೆಚ್ಚು ಖಾಯಿಲೆಗಳು ನಿಮ್ಮಿಂದ ದೂರವಿರುತ್ತವೆ.
# ಜ್ವರ ಹಾಗೂ ಶೀತಕ್ಕೆ ರಾಮಬಾಣ :
ಜ್ವರ ಹಾಗೂ ಶೀತಕ್ಕೆ ಇದರ ಎಲೆಗಳನ್ನು ಚಹಾದೊಂದಿಗೆ ಕುದಿಸಿ ಕುಡಿಯುವುದರಿಂದ ಮಲೇರಿಯಾ ಹಾಗೂ ಡೆಂಗ್ಯೂ ಜ್ವರ ಉಪಶಮನವಾಗುತ್ತದೆ. ಮತ್ತು ತುಳಸಿ ರಸ ಜ್ವರವನ್ನು ತಗ್ಗಿಸುವಲ್ಲಿ ಸಹಕಾರಿ. ಇದರ ಎಲೆಯನ್ನು ಜಗಿಯುವುದರಿಂದ ಶೀತ ಹಾಗೂ ಕೆಮ್ಮು ನಿವಾರಣೆಯಾಗುತ್ತದೆ.
# ಕಿಡ್ನಿ ಕಲ್ಲಿನ ಸಮಸ್ಯೆ :
ತುಳಸಿ ರಸವನ್ನು ಜೇನಿನೊಂದಿಗೆ ನಿಯಮಿತವಾಗಿ 6 ತಿಂಗಳು ತೆಗೆದುಕೊಂಡಲ್ಲಿ ನೋವಿನ ಬಾಧೆ ಕಡಿಮೆಯಾಗುತ್ತದೆ. ಹೀಗೆ ಬಹುವಿಧ ಕಾಯಿಲೆಗಳಿಗೆ ಮನೆಮದ್ದಾಗಿರುವ ತುಳಸಿಯು ವಾತಾವರಣಕ್ಕೂ ಒಳ್ಳೆಯದು. ಹೆಚ್ಚು ಖರ್ಚಿಲ್ಲದೆ ಬೆಳೆಸಬಹುದಾದ ತುಳಸಿಯಿಂದ ನಾವು ಪಡೆಯಬಹುದಾದ ಪ್ರಯೋಜನ ಅಪಾರವಾದುದು.
# ಜ್ಞಾಪಕ ಶಕ್ತಿ ಹೆಚ್ಚುತ್ತದೆ :
ಐದು ತುಳಸಿ ಎಲೆಯನ್ನು ಪ್ರತಿ ದಿನ ತಿಂದರೆ ಹಲವು ಸೋಂಕು ಮತ್ತು ರೋಗವನ್ನು ದೂರವಿರಿಸಬಹುದು. ಇದರ ಸೇವನೆಯಿಂದ ಜ್ಞಾಪಕ ಶಕ್ತಿಯೂ ಹೆಚ್ಚಾಗಿ ಬುದ್ಧಿವಂತಿಕೆಯೂ ಚುರುಕುಗೊಳ್ಳುತ್ತದೆ. ಇದನ್ನು ವಯಸ್ಸಾದವರು ಸೇವಿಸಿದರೆ ಸುಸ್ತು ಕಡಿಮೆಗೊಳ್ಳುತ್ತದೆ.
# ಕೊಲೆಸ್ಟ್ರಾಲ್ :
ತುಳಸಿ ಬೊಜ್ಜನ್ನು ನಿಯಂತ್ರಿಸುವುದಲ್ಲದೆ ರಕ್ತದಲ್ಲಿನ ಕೊಬ್ಬಿನಂಶವನ್ನೂ ನಿಯಂತ್ರಿಸುತ್ತದೆ. ಜ್ವರ, ಕೆಮ್ಮು ಮತ್ತು ಟಿಬಿ ರೋಗಿಗಳೂ 3 ಗ್ರಾಂ ತುಳಸಿಯನ್ನು ಪ್ರತಿನಿತ್ಯ ಸೇವಿಸಿದರೆ ಉಪಯೋಗ ಹೊಂದಬಹುದು.
EmoticonEmoticon