ಸರಕಾರಿ ಶಾಲೆಗಳ ಕಟ್ಟಡಗಳ ರಕ್ಷಣೆಗೆ ಹೊಸ ಸಾಫ್ಟವೇರ್ ಅಭಿವೃದ್ಧಿ: ಸುರೇಶ್‍ ಕುಮಾರ್

March 15, 2021

 


ಬೆಂಗಳೂರು, ಮಾ.15: ಮುಂದಿನ ಮೂರು ತಿಂಗಳಲ್ಲಿ ಎಲ್ಲ ಸರಕಾರಿ ಶಾಲೆಗಳ ಕಟ್ಟಡಗಳನ್ನು ಸಂರಕ್ಷಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಈಗಾಗಲೇ ಹೊಸ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗಿದ್ದು, ಇದರಲ್ಲಿ 26 ಸಾವಿರ ಕಟ್ಟಡಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಹೇಳಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಕಾಂತರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಎಲ್ಲ ಸರಕಾರಿ ಶಾಲೆಗಳ ಜಾಗಗಳು ಒತ್ತುವರಿಯಾಗಿದ್ದಲ್ಲಿ ಕೂಡಲೇ ಅದನ್ನು ಸುಪರ್ದಿಗೆ ತೆಗೆದುಕೊಳ್ಳುವಂತೆ ಎಲ್ಲ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳ ಸ್ಥಿರಾಸ್ತಿಯನ್ನು ಖಾತೆ ಮಾಡಿ ಆರ್‍ಟಿಸಿಯಲ್ಲಿ ನಮೂದಿಸಲು ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ.

ರಾಜ್ಯದಲ್ಲಿ 20,751 ಸರಕಾರಿ ಪ್ರಾಥಮಿಕ ಶಾಲೆಗಳು, 22,499 ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗಳು, 4,727 ಸರಕಾರಿ ಪ್ರೌಢಶಾಲೆಗಳು ಹಾಗೂ 1,234 ಸರಕಾರಿ ಪದವಿ ಪೂರ್ವ ಕಾಲೇಜುಗಳು ಇವೆ ಎಂದು ಹೇಳಿದರು.

Related Articles

Advertisement
Previous
Next Post »