ಸೊಸೆಯ ಕತ್ತು ಕೊಯ್ದು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಮಾವ

March 06, 2021


 ಚಾಮರಾಜನಗರ, ಫೆ.6: ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಬಗ್ಗೆ ಶಂಕೆ ವ್ಯಕ್ತಪಡಿಸಿ ಸೊಸೆಯ ಕತ್ತು ಕೊಯ್ದು ಹತ್ಯೆ ಮಾಡಿದ ಮಾವ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆದರ್ಶನಗರ ಬಡಾವಣೆಯಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆದರ್ಶ ನಗರ ಬಡಾವಣೆ ನಿವಾಸಿ ಚಿಕ್ಕಹುಚ್ಚಯ್ಯ ನೇಣು ಹಾಕಿಕೊಂಡು ಸಾವನ್ನಪ್ಪಿದ್ದು, ಇವರು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ‌ಸೊಸೆ ಸುಮಿತ್ರಳನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮದ್ಯಾಹ್ನ 3.30ರ ವೇಳೆಯಲ್ಲಿ ಸೊಸೆ ಸುಮಿತ್ರಳ ಕತ್ತು ಕುಯ್ದ ಮಾವ ಚಿಕ್ಕಹುಚ್ಚಯ್ಯ, ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಚಿಕ್ಕಹುಚ್ಚಯ್ಯ ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದೆ.

ಮನೆಗೆ ಬಂದ ಕುಟುಂಬ ಸದಸ್ಯರು ಘಟನೆ ಸಂಬಂಧ ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Related Articles

Advertisement
Previous
Next Post »