ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್

March 07, 2021

 


ಬೆಂಗಳೂರು : ಬಡ್ತಿ ನಿರೀಕ್ಷೆಯಲ್ಲಿರುವ ಪ್ರೌಢಶಾಲಾ ಶಿಕ್ಷಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಬೆಂಗಳೂರು ವಿಭಾಗದ ಸರ್ಕಾರಿ ಪ್ರೌಢಶಾಲೆಯ ಅರ್ಹ ಸಹ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಬಡ್ತಿ ನೀಡುವ ಕುರಿತು ಮಾರ್ಚ್ 9 ರಂದು ಕೌನ್ಸೆಲಿಂಗ್ ಪ್ರಕ್ರಿಯಯೆ ಆರಂಭಿಸಲಿದೆ.

ತತ್ಸಮಾನ ವೃಂದದ ಹುದ್ದೆಗಳಲ್ಲಿರುವ ಅರ್ಹ ಅಭ್ಯರ್ಥಿಗಳು, ಪ್ರೌಢಶಾಲೆಯ ಸಹ ಶಿಕ್ಷಕರನ್ನು ಮುಖ್ಯ ಶಿಕ್ಷಕರು ಅಥವಾ ತತ್ಸಮಾನ ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಈಗಾಗಲೇ ಅರ್ಹ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರಿನ ಕೆ.ಜಿ. ರಸ್ತೆಯ ಶಿಕ್ಷಕರ ಸದನದಲ್ಲಿ 60 ಶಿಕ್ಷಕರ ಪೈಕಿ 57 ಅರ್ಹ ಅಭ್ಯರ್ಥಿಗಳಿಗೆ ಮುಂಬಡ್ತಿ ನೀಡುವ ಸಂಬಂಧ ಮಾರ್ಚ್ 9 ರಂದು ಬೆಳಗ್ಗೆ 11 ಗಂಟೆಯಿಂದ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ.


Related Articles

Advertisement
Previous
Next Post »