ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಸಾಮಾನ್ಯ ವರ್ಗಾವಣೆ ರದ್ದುಗೊಳಿಸಿ ಆದೇಶ

March 05, 2021
Friday, March 5, 2021

 


ತಾವು ಬಯಸಿದ ಸ್ಥಳಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಸರ್ಕಾರಿ ನೌಕರರಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಅನುಕೂಲಕರ. ಆದರೆ ರಾಜ್ಯ ಸರ್ಕಾರ ಈ ಬಾರಿ ಅವಧಿಗೂ ಮುನ್ನ ನಡೆಯುವ ಕೆಲ ವರ್ಗಾವಣೆಯನ್ನು ರದ್ದುಗೊಳಿಸಿದ್ದು, ಇದರಿಂದಾಗಿ ವರ್ಗಾವಣೆ ನಿರೀಕ್ಷೆಯಲ್ಲಿದ್ದ ನೌಕರರು ನಿರಾಸೆಗೊಂಡಿದ್ದಾರೆ.

ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಇ.ವಿ. ರಮಣರೆಡ್ಡಿ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಈ ಕುರಿತು ಟಿಪ್ಪಣಿ ಹೊರಡಿಸಿದ್ದು, ಅವಶ್ಯವಿರುವ ಖಾಲಿ ಸ್ಥಾನಗಳನ್ನು ಭರ್ತಿ ಮಾಡುವುದನ್ನು ಹೊರತುಪಡಿಸಿದರೆ ಬೇರೆ ಯಾವುದೇ ವರ್ಗಾವಣೆಗಳನ್ನು ಪರಿಗಣಿಸದಂತೆ ಸೂಚಿಸಿದ್ದಾರೆ. 2021 ನೇ ಸಾಲಿನ ಸಾಮಾನ್ಯ ವರ್ಗಾವಣೆಗೆ ಪರಿಗಣಿಸದಿರಲು ತೀರ್ಮಾನಿಸಲಾಗಿದೆ. ಪ್ರಸಕ್ತ ಸಾಲಿನ ವರ್ಗಾವಣೆ ಆರಂಭವಾಗುವವರೆಗೂ ಈ ನಿಯಮ ಜಾರಿಯಲ್ಲಿರಲಿದೆ ಎನ್ನಲಾಗಿದೆ.

ಒಂದೊಮ್ಮೆ ವರ್ಗಾವಣೆ ಮಾಡುವ ಅನಿವಾರ್ಯತೆ ತಲೆದೋರಿದ ಸಂದರ್ಭದಲ್ಲಿ ಅಂತಹ ವೇಳೆ ಮುಖ್ಯಮಂತ್ರಿಗಳಿಗೆ ಕಡತ ಸಲ್ಲಿಸಿ ಆದೇಶ ಪಡೆದ ಬಳಿಕವೇ ವರ್ಗಾವಣೆ ಪ್ರಕ್ರಿಯೆ ನಡೆಸಬಹುದು ಎಂದು ತಿಳಿಸಲಾಗಿದೆ. ಒಂದೊಮ್ಮೆ ಈ ನಿಯಮ ಉಲ್ಲಂಘಿಸಿ ವರ್ಗಾವಣೆ ನಡೆಸಿದ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳು ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.


Thanks for reading ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಸಾಮಾನ್ಯ ವರ್ಗಾವಣೆ ರದ್ದುಗೊಳಿಸಿ ಆದೇಶ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ಸಾಮಾನ್ಯ ವರ್ಗಾವಣೆ ರದ್ದುಗೊಳಿಸಿ ಆದೇಶ

Post a Comment