'ಬೇಸಿಗೆ ರಜೆ, ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್'‌ ಮಾಡೋ ಬಗ್ಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

March 13, 2021
Saturday, March 13, 2021

 ಬೆಂಗಳೂರು: ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ, ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್‌ ಮಾಡೋ ಬಗ್ಗೆ ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ ವಿರುದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ದ ಸ್ಪಷ್ಟೀಕರಣ ನೀಡಿದ್ದಾರೆ. ಅವರು ಶನಿವಾರ ಮಕ್ಕಳಿಗೆ ಶಿಕ್ಷಕರು ವಿದ್ಯಾರ್ಥಿಗಳ ಕಲಿಕೆಯನ್ನು ನೀಡುವಲ್ಲಿ ತಲ್ಲಿನರಾಗಿದ್ದು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯಲ್ಲಿ ಇಲಾಖೆ ಸಹಕಾರ ನೀಡುತ್ತಿದೆ. ಈ ಹೊತ್ತಿನಲ್ಲಿ ಬೇಸಿಗೆ ರಜೆಯನ್ನು ನೀಡುವ ಉದ್ದೇಶವಾಗಲಿ, ಪ್ರಸ್ತಾವನೆಯಾಗಲಿ ಇಲಾಖೆ ಮುಂದೆ ಇಲ್ಲ ಅಂತ ಅವರು ಹೇಳಿದ್ದಾರೆ.ಈಗಾಗಲೇ ಖಾಸಗಿ ಶಾಲೆಗಳು ಆನ್‌ಲೈನ್‌ ಮೂಲಕ ತಮ್ಮ ವಿದ್ಯಾರ್ಥಿಗಳಿಗೆ ಕಲಿಕೆಯ ಕಾರ್ಯಕ್ರವನ್ನು ನೀಡುತ್ತಿದೆ.

ಇದಲ್ಲದೇ ರಾಜ್ಯ ಸರ್ಕಾರ ಕೂಡ ದರಿಂದ ಐದನೇ ತರಗತಿ ಸರ್ಕಾರಿ ಶಾಲಾ ಮಕ್ಕಳಿಗೆ ಆಕಾಶವಾಣಿಯಲ್ಲಿ ಕಲಿಯೋಣ- ನಲಿಯೋಣ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿದ್ದು, ಇದರ ಜೊತೆಗೆ ದೂರದರ್ಶನದಲ್ಲಿ ಸಂವೇದಾ ಕಾರ್ಯಕ್ರಮವನ್ನು ಕೂಡ ಪ್ರಸಾರ ಮಾಡುತ್ತಿದ್ದು, ಮಕ್ಕಳು ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು, ಸುಳ್ಳು ಸುದ್ದಿಗಳನ್ನು ನಂಬಬಾರದು ಅಂತ ಅವರು ಮನವಿ ಮಾಡಿಕೊಂಡಿದ್ದಾರೆ.

Thanks for reading 'ಬೇಸಿಗೆ ರಜೆ, ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್'‌ ಮಾಡೋ ಬಗ್ಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on 'ಬೇಸಿಗೆ ರಜೆ, ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್'‌ ಮಾಡೋ ಬಗ್ಗೆ ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

Post a Comment