ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 1.10 ಲಕ್ಷ ರೂ. ದಂಡ -Vishwanews24

April 10, 2021
Saturday, April 10, 2021


 ಮಂಗಳೂರು (Vishwanews24): ಮೂರು ವರ್ಷದ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ವಿಶೇಷ ಪೋಕ್ಸೊ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 1.10 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಶಿಕ್ಷೆಗೊಳಗಾದ ಆರೋಪಿಯನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ನಿವಾಸಿ ಶಶಿ ಯಾನೆ ಶಶಿಕುಮಾರ್ (29) ಎಂದು ಗುರುತಿಸಲಾಗಿದೆ.

ಆರೋಪಿ ಶಶಿಕುಮಾರ್ ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ಆಲಂಗಾರು ಎಂಬಲ್ಲಿನ ಫೈನಾನ್ಸ್‌ನಲ್ಲಿ ಪಿಗ್ಮಿ ಸಂಗ್ರಾಹಕನಾಗಿ ಕೆಲಸ ಮಾಡುತ್ತಿದ್ದು, ಈತ ತನ್ನ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದ. ಅಲ್ಲಿಗೆ ಸಂಬಂಧಿಕರೇ ಆಗಿರುವ ನೆರೆಮನೆಯ ಅಪ್ರಾಪ್ತ ಬಾಲಕಿ ಟಿವಿ ನೋಡಲು ಬರುತ್ತಿದ್ದು, 2017ರ ನವೆಂಬರ್‌ನಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಆ ಬಳಿಕ ಅನೇಕ ಬಾರಿ ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿತ್ತು.

ಇನ್ನು ಕೆಲವು ಸಮಯದ ಬಳಿಕ ಆಕೆಗೆ ಆರೋಗ್ಯ ಸಮಸ್ಯೆ ಎದುರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಧಾವಿಸಿದಾಗ ಆಕೆ ಗರ್ಭಿಣಿಯಾಗಿರುವುದನ್ನು ವೈದ್ಯರು ತಿಳಿಸಿದ್ದಾರೆ. ಬಳಿಕ ಆಕೆಯನ್ನು ವಿಚಾರಿಸಿದಾಗ ಶಶಿಕುಮಾರ್ ಇದಕ್ಕೆ ಕಾರಣ ಎಂದು ಹೇಳಿದ್ದಳು.

ಈ ಬಗ್ಗೆ ಆಕೆಯ ತಂದೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ 2018ರ ಜೂ.26ರಂದು ದೂರು ನೀಡಿದ್ದು, ಆರೋಪಿಯನ್ನು ಬಂಧಿಸಿ ಆಗ ಇದ್ದ ಇನ್‌ಸ್ಪೆಕ್ಟರ್ ರಾಮಚಂದ್ರ ನಾಯ್ಕೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಸಂತ್ರಸ್ತ ಮಗುವಿನ ಹಾಗೂ ಶಶಿಕುಮಾರ್‌ನ ಡಿಎನ್‌ಎ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪೂರಕ ವರದಿ ಬಂದಿತ್ತು. 13 ಮಂದಿ ಸಾಕ್ಷಿ ಹೇಳಿದ್ದು, 25 ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿತ್ತು. ನ್ಯಾಯಾಧೀಶೆ ಸಾವಿತ್ರಿ ವೆಂಕಟರಮಣ ಅವರು ಶುಕ್ರವಾರ ತೀರ್ಪು ಪ್ರಕಟಿಸಿದ್ದಾರೆ.

ಇನ್ನು ದಂಡದ ಮೊತ್ತದಲ್ಲಿ 1 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಮೂಲಕ 2 ಲಕ್ಷ ರೂ. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.

Thanks for reading ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 1.10 ಲಕ್ಷ ರೂ. ದಂಡ -Vishwanews24 | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ, 1.10 ಲಕ್ಷ ರೂ. ದಂಡ -Vishwanews24

Post a Comment