ಪರೀಕ್ಷೆ ಇಲ್ಲದೇ 8,9,11 ನೇ ತರಗತಿ ವಿದ್ಯಾರ್ಥಿಗಳು ಪಾಸ್ : ರಾಜಸ್ಥಾನ ಸರ್ಕಾರದಿಂದ ಮಹತ್ವದ ನಿರ್ಧಾರ

April 15, 2021

 


ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಸರ್ಕಾರವು 10 ಮತ್ತು 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿದೆ. ಜೊತೆಗೆ 8,9, 11 ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಲು ನಿರ್ಧರಿಸಿದೆ.

ಸಿಬಿಎಸ್ ಇ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿದ ಮತ್ತು ರದ್ದುಗೊಳಿಸಿದ ಸ್ವಲ್ಪ ಸಮಯದ ನಂತರ ಬೋರ್ಡ್ ಪರೀಕ್ಷೆಯನ್ನು ಮುಂದೂಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ರಾಜ್ಯ ಶಿಕ್ಷಣ ಸಚಿವ ಗೋವಿಂದ್ ಸಿಂಗ್ ದೋಟಾಸ್ರಾ ನಡುವೆ ಉನ್ನತ ಮಟ್ಟದ ಸಭೆ ನಡೆಸಲಾಯಿತು, ಅಲ್ಲಿ ಸರ್ಕಾರ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ ಎನ್ನಲಾಗಿದೆ.

ರಾಜಸ್ಥಾನದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 8, 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಮುಂದಾಗಿದೆ.


Related Articles

Advertisement
Previous
Next Post »