BIGG BREAKING NEWS : ರಾಜ್ಯದ ಕೆಲ ಇಲಾಖೆಯ 'ಸರ್ಕಾರಿ ನೌಕರ'ರಿಗೆ ಕಚೇರಿ 'ಹಾಜರಾತಿ'ಯಿಂದ ವಿನಾಯ್ತಿ ನೀಡಿ 'ಸರ್ಕಾರ' ಆದೇಶ

April 27, 2021
Tuesday, April 27, 2021

 


ಬೆಂಗಳೂರು : ಕೊರೋನಾ ಸೋಂಕಿನ ಭೀಕರತೆಯಿಂದಾಗಿ ರಾಜ್ಯದಲ್ಲಿ 14 ದಿನ ಕೊರೋನಾ ಕರ್ಪ್ಯೂ ಜಾರಿಗೊಳಿಸಲಾಗಿದೆ. ಮೇ.12ರವರೆಗೆ ಸಂಪೂರ್ಣ ಕರ್ಪ್ಯೂ ರಾಜ್ಯಾಧ್ಯಂತ ಜಾರಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ರಾಜ್ಯದ ಅಗತ್ಯ ಸೇವೆ ಇಲಾಖೆಯ ಹೊರತಾಗಿ, ಕೆಲ ಇಲಾಖೆಗಳಲ್ಲಿ ಶೇ.50ರಷ್ಟು ಸಿಬ್ಬಂದಿಗಳು ಕೆಲಸಕ್ಕೆ ರಾಜ್ಯ ಸರ್ಕಾರ ಸೂಚಿಸಿದ್ದರೇ, ಇನ್ನುಳಿತ ಇಲಾಖೆಯ ಸಿಬ್ಬಂದಿಗಳಿಗೆ ಹಾಜರಾತಿಯಿಂದ ವಿನಾಯ್ತಿ ನೀಡಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ ಮತ್ತು ಕಂದಾಯ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗತಕ್ಕದ್ದು.

ಇನ್ನುಳಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಆರ್ಥಿಕ ಇಲಾಖೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ವಾಣಿಜ್ಯ, ಕೈಗಾರಿಕಾ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳು ಶೇ.50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು.

ಉಳಿದ ಎಲ್ಲಾ ಇತರೇ ಇಲಾಖೆಗಳ ಅಧಿಕಾರಿ, ನೌಕರರುಗಳಿಗೆ, ಕಚೇರಿ ಹಾಜರಾತಿಯಿಂದ ವಿನಾಯಿತಿ ನೀಡಲಾಗಿರುತ್ತದೆ. ಹೀಗೆ ಹಾಜರಾತಿಯಿಂದ ವಿನಾಯಿತಿ ನೀಡಲ್ಪಟ್ಟ ಇಲಾಖೆಯ ಕಾರ್ಯದರ್ಶಿಯವರು, ಇಲಾಖಾ ಮುಖ್ಯಸ್ಥರು ಇಚ್ಛಿಸಿದಲ್ಲಿ, ಅವರು ಬಯಸುವಂತಹ ಅಧಿಕಾರಿ, ನೌಕರರುಗಳು ಯಾವುದೇ ಕಾರಣ ನೀಡದೇ ಕಚೇರಿಗೆ ಹಾಜರಾಗುವುದು ಎಂಬುದಾಗಿ ತಿಳಿಸಿದ್ದಾರೆ.

ವರದಿ : ವಸಂತ ಬಿ ಈಶ್ವರಗೆರೆThanks for reading BIGG BREAKING NEWS : ರಾಜ್ಯದ ಕೆಲ ಇಲಾಖೆಯ 'ಸರ್ಕಾರಿ ನೌಕರ'ರಿಗೆ ಕಚೇರಿ 'ಹಾಜರಾತಿ'ಯಿಂದ ವಿನಾಯ್ತಿ ನೀಡಿ 'ಸರ್ಕಾರ' ಆದೇಶ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIGG BREAKING NEWS : ರಾಜ್ಯದ ಕೆಲ ಇಲಾಖೆಯ 'ಸರ್ಕಾರಿ ನೌಕರ'ರಿಗೆ ಕಚೇರಿ 'ಹಾಜರಾತಿ'ಯಿಂದ ವಿನಾಯ್ತಿ ನೀಡಿ 'ಸರ್ಕಾರ' ಆದೇಶ

Post a Comment