BIGG NEWS : 'SSLC', 'PUC' ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ

April 10, 2021
Saturday, April 10, 2021

 


ಡಿಜಿಟಲ್ ಡೆಸ್ಕ್ : ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ ನೀಡಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದಲೇ ಒಂದು ಟಿವಿ ಚಾನೆಲ್ ಆರಂಭಿಸುವ ಪ್ರಸ್ತಾಪವಿದೆ ಎಂದು ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ' ರಾಜ್ಯದಲ್ಲಿ ಮೇ 24 ರಿಂದ ಪಿಯುಸಿ ಪರೀಕ್ಷೆಗಳು, ಜೂನ್ 20 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗುತ್ತದೆ. ಕೊರೊನಾ ಏಪ್ರಿಲ್ ನಲ್ಲಿ ಇನ್ನೂ ಕೂಡ ಹೆಚ್ಚಾಗುತ್ತದೆ, ಮೇ ನಲ್ಲಿ ಕಡಿಮೆಯಾಗುತ್ತದೆ ಎಂಬ ವರದಿಗಳಿದೆ. ಕೊರೊನಾ ಜೊತೆ ಬದುಕು ಅನಿವಾರ್ಯವಾಗಿದೆ. ಕೊರೊನಾ ನಡುವೆ ಪರೀಕ್ಷೆ ನಡೆಸುವುದು ನಮ್ಮ ಕರ್ತವ್ಯ. ಕೊರೊನಾ ನಡುವೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ನಿಜವಾದ ಕೊರೊನಾ ವಾರಿಯರ್ಸ್ ಎಂದು ಹೇಳಿದ್ದಾರೆ.

ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8,75,798 ಜನ ವಿದ್ಯಾರ್ಥಿಗಳು ನೊಂದಣೀ ಮಾಡಿಕೊಂಡಿದ್ದಾರೆ. ಪಿಯುಸಿ ಗೆ 7,1,651 ಜನ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ಆರಂಭಿಸಲಾಗುವುದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದಲೇ ಒಂದು ಟಿವಿ ಚಾನೆಲ್ ಆರಂಭಿಸುವ ಪ್ರಸ್ತಾಪವಿದೆ ಎಂದು ಹೇಳಿದ್ದಾರೆ.


Thanks for reading BIGG NEWS : 'SSLC', 'PUC' ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIGG NEWS : 'SSLC', 'PUC' ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ

Post a Comment