ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಕಾ-ಬೇಡವಾ? ನಿರ್ಧರಿಸಲು ಸೋಮವಾರ ನಡೆಯಲಿದೆ ಸಭೆ

April 03, 2021
Saturday, April 3, 2021

 


ಬೆಂಗಳೂರು: ಕರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಿಯೇ ಮುಂದಿನ ತರಗತಿಗೆ ಪ್ರಮೋಟ್ ಮಾಡಬೇಕಾ? ಅಥವಾ ಹಾಗೇ ಪ್ರಮೋಟ್ ಮಾಡಿಬಿಡೋದಾ? ಎಂಬ ಬಗ್ಗೆ ಚರ್ಚಿಸಲು ಶಿಕ್ಷಣ ಇಲಾಖೆ ಸೋಮವಾರ ಸಭೆ ನಡೆಸಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ತಜ್ಞರು, ಖಾಸಗಿ ಶಾಲಾ ಸಂಘಟನೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿ ಮಕ್ಕಳಿಗೆ ಲಿಖಿತ ಪರೀಕ್ಷೆ ನಡೆಸುವುದು ಬೇಡ ಎಂಬ ಆಲೋಚನೆಯಲ್ಲಿ ಶಿಕ್ಷಣ ಇಲಾಖೆ ಇದೆ. ಆದರೆ, ಖಾಸಗಿ ಶಾಲೆಗಳು ಪರೀಕ್ಷೆ ನಡೆಸಬೇಕೆಂದು ಪಟ್ಟು ಹಿಡಿದಿವೆ. ಈ ಹಿನ್ನೆಲೆಯಲ್ಲಿ ಮೌಲ್ಯಾಂಕನ ಪರೀಕ್ಷೆ ನಡೆಸಿ ಮುಂದಿನ ತರಗತಿಗೆ ತೇರ್ಗಡೆ ನೀಡುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ಆಗಲಿದೆ.

ಮೌಲ್ಯಾಂಕನ ಯಾವ ರೀತಿ ಮಾಡಬೇಕು. ಇದುವರೆಗಿನ ತರಗತಿ ಚಟುವಟಿಕೆಗಳ ಮೇಲೆ ಮಕ್ಕಳ ಕಲಿಕಾ ಸಾಮರ್ಥ್ಯದ ಮೌಲ್ಯಮಾಪನದೊಂದಿಗೆ ಮೌಲ್ಯಾಂಕನ ನಡೆಸಿದರೆ ಸಾಕಾ? ಅಥವಾ ಒಂದೆರಡು ದಿನ ಮಕ್ಕಳನ್ನು ಶಾಲೆಗೆ ಕರೆಸಿ ಮೌಖಿಕವಾಗಿ ಪ್ರಶ್ನೆಗಳನ್ನು ಕೇಳಿ ಅವರ ಕಲಿಕಾ ಸಾಮರ್ಥ್ಯ ಅಳೆಯಬೇಕಾ? ಎಂಬ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ.

ಈ ಮಧ್ಯೆ ಸರ್ಕಾರಿ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆಯೇ ಆರಂಭವಾಗದ ಕಾರಣ ಮೌಲ್ಯಾಂಕನವೂ ಅಗತ್ಯವಿಲ್ಲ ಎಂದು ತಿಳಿದು ಬಂದಿದೆ. ಇದರ ಬದಲಾಗಿ ನೇರವಾಗಿ ಮುಂದಿನ ತರಗತಿಗೆ ಪ್ರಮೋಟ್ ಮಾಡಲು ಇಲಾಖೆ ಆಲೋಚಿಸಿದೆ.
ನೃಪತುಂಗ ರಸ್ತೆಯ ಸಮಗ್ರ ಶಿಕ್ಷಣ ಕರ್ನಾಟಕ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಸಭೆ ನಿಗದಿಪಡಿಸಿದ್ದು, ಸಭೆಗೆ ಶಿಕ್ಷಣ ತಜ್ಞರಾದ ಡಾ.ವಿ.ಪಿ. ನಿರಂಜನಾರಾಧ್ಯ, ನೋಂದಾಯಿತ ಅನುದಾನರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘ-ಕರ್ನಾಟಕದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ಮಾನ್ಯತೆ ಪಡೆದ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಹಾಲನೂರು ಲೇಪಾಕ್ಷ, ಒಕ್ಕೂಟದ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಅವರಿಗೆ ಆಹ್ವಾನಿಸಲಾಗಿದೆ. ಸಭೆಯಲ್ಲಿ ಇಲಾಖೆ ಪ್ರಭಾರ ಅಪರ ಮುಖ್ಯಕಾರ್ಯದರ್ಶಿ ಜಿ.ಕುಮಾರ್ ನಾಯಕ್, ಆಯುಕ್ತ ಅನ್ಬುಕುಮಾರ್ ಇತರರು ಇರಲಿದ್ದಾರೆ.


Thanks for reading ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಕಾ-ಬೇಡವಾ? ನಿರ್ಧರಿಸಲು ಸೋಮವಾರ ನಡೆಯಲಿದೆ ಸಭೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ವಿದ್ಯಾರ್ಥಿಗಳಿಗೆ ಪರೀಕ್ಷೆ ಬೇಕಾ-ಬೇಡವಾ? ನಿರ್ಧರಿಸಲು ಸೋಮವಾರ ನಡೆಯಲಿದೆ ಸಭೆ

Post a Comment