ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತದ ಬಗ್ಗೆ ನೌಕರರ ಸಂಘದ ಅಧ್ಯಕ್ಷರು ಹೇಳಿದ್ದೇನು..?

April 27, 2021

 


ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾವಳಿಯಿಂದ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಹಾಗಾಗಿ ರಾಜ್ಯದ ಎಲ್ಲ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳವನ್ನು ಕಡಿತ ಮಾಡುವ ಸುದ್ದಿ ಮಾಧ್ಯಮಗಳಲ್ಲಿ ಜೋರಾಗಿ ಕೇಳಿಬಂದಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು, ಸರ್ಕಾರಿ ನೌಕರರ ಒಂದು ತಿಂಗಳ ವೇತನ ಕಡಿತ ಮಾಡುವ ಸುದ್ದಿ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ರಾಜ್ಯದ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕಡಿತ ಮಾಡುವ ತೀರ್ಮಾನವನ್ನು ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡಿದೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ರಾಜ್ಯದ ಸರ್ಕಾರಿ ನೌಕರರಲ್ಲಿ ಗೊಂದಲ ಉಂಟುಮಾಡಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ.

ಯಾವುದೇ ಸರ್ಕಾರಗಳು ಈ ರೀತಿಯ ತೀರ್ಮಾನಗಳನ್ನು ತಗೆದುಕೊಳ್ಳುವ ಮುನ್ನ ಸಂಪ್ರದಾಯದಂತೆ, ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನಗಳನ್ನು ತಗೆದುಕೊಳ್ಳಬೇಕು. ಆದರೆ, ಈ ವರೆಗೂ ಆ ರೀತಿಯ ಯಾವುದೇ ಚರ್ಚೆಗಳನ್ನು ಸರ್ಕಾರ ನಮ್ಮ ಜೊತೆಗೆ ಮಾಡಿರುವುದಿಲ್ಲ ಎಂದು ತಿಳಿಸಿದ್ದಾರೆ.

ಇಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಕಡಿತ ಮಾಡುತ್ತೇವೆ ಎಂಬ ಅಂಶ ಸತ್ಯಕ್ಕೆ ದೂರವಾದದ್ದು ಹಾಗೂ ಗಾಳಿ ಸುದ್ದಿ ಎಂಬ ವಿಚಾರವನ್ನು ಸಮಸ್ತ ರಾಜ್ಯದ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ಸಂಘವು ತಿಳಿಸುತ್ತದೆ ಹಾಗೂ ಗೊಂದಲಕ್ಕಿಡಾಗಬಾರದೆಂದು ವಿನಂತಿಸಿಕೊಂಡಿದ್ದಾರೆ.

Related Articles

Advertisement
Previous
Next Post »