ವಿದ್ಯಾರ್ಥಿಗಳಿಗೆ ಶೀಘ್ರವೇ `ಸೇತು ಬಂಧ’ ಯೋಜನೆ : ಸಚಿವ ಸುರೇಶ್ ಕುಮಾರ್

April 10, 2021

 


ಚಿತ್ರದುರ್ಗ : ರಾಜ್ಯದ 1 ರಿಂದ 5 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಶೀಘ್ರದಲ್ಲೇ ಸೇತು ಬಂಧ ಯೋಜನೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ 1 ರಿಂದ 5 ನೇ ತರಗತಿಗೆ ಭೌತಿಕ ತರಗತಿಗಳು ನಡೆದಿಲ್ಲ. ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಹಿಂದಿನ ತರಗತಿಯ ಪಾಠ ಕಲಿಸಿ ಮುಂದಿನ ತರಗತಿಯ ಪಾಠ ಕಲಿಸುವ ಸೇತು ಬಂಧ ಯೋಜನೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಜೂನ್ 21 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭವಾಗಲಿದ್ದು, 8,75,798 ವಿದ್ಯಾರ್ಥಿಗಳಿಂದ ಪರೀಕ್ಷೆಗೆ ಹಾಜರಾಗುವ ಅರ್ಜಿ ಭರ್ತಿಯಾಗಿದೆ. ಮೇ. 24 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.


Related Articles

Advertisement
Previous
Next Post »