ತರಗತಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಹತ್ತನೇ ತರಗತಿ ವಿದ್ಯಾರ್ಥಿ

April 10, 2021

 


ಕಲಬುರಗಿ, ಎ.10: ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ತರಗತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಂಎಸ್ ಕಿ ಮಿಲ್ ನಲ್ಲಿ ನಡೆದಿದೆ.

ಮುಹಮ್ಮದ್ ಉಮರ್ ಮೆಹಬೂಬ್ ಸಾಬ್ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ವಿದ್ಯಾರ್ಥಿ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಹೇಳಲಾಗುತ್ತಿದ್ದು, ಆತ್ಮಹತ್ಯೆಗೂ ಮುನ್ನ ತರಗತಿಯ ಬೋರ್ಡ್ ಮೇಲೆ ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಶೋಕ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.


Related Articles

Advertisement
Previous
Next Post »