ಕೊರೊನಾ ಹಾವಳಿ - ಶಾಲೆಗಳಿಗೆ ಮತ್ತೆ ರಜೆ ಘೋಷಣೆ!

April 09, 2021ನವದೆಹಲಿ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ದೆಹಲಿಯಲ್ಲಿ ಕೂಡ ಸೋಂಕಿನ ಹಾವಳಿ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹೀಗಾಗಿ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳನ್ನು ಬಂದ್ ಮಾಡುವಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶ ನೀಡಿದ್ದಾರೆ.

ನವದೆಹಲಿಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿದ ಮೂರು ದಿನಗಳ ನಂತರದಲ್ಲಿ ಶಾಲೆಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಈಗಾಗಲೇ ದೆಹಲಿಯಲ್ಲಿ ಏ. 30ರ ವರೆಗೂ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿದೆ. ಕೊರೊನಾ ವೈರಸ್ ನ ನಾಲ್ಕನೇ ಅಲೆಯಿಂದ ಮಕ್ಕಳು ಮತ್ತು ಯುವಕರಿಗೆ ಹೆಚ್ಚು ಅಪಾಯವಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಸದ್ಯ ವಿದ್ಯಾರ್ಥಿಗಳು ಹಾಗೂ ಕೆಲಸಕ್ಕೆ ಹೋಗುತ್ತಿರುವ ಯುವಕರಲ್ಲಿಯೇ ಹೆಚ್ಚಾಗಿ ಸೋಂಕು ಕಾಣಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಕೆಲವು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸುತ್ತಿವೆ. ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 7,437 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೂ 11,157 ಜನ ಕೊರೊನಾ ಮಹಾಮಾರಿಗೆ ಬಲಿಯಾಗಿದದಾರೆ.

Related Articles

Advertisement
Previous
Next Post »