Lockdown: 15 ದಿನ ಲಾಕ್‌ಡೌನ್? ಸಿಎಂ ಇಂದು ಅಂತಿಮ ನಿರ್ಧಾರ!

April 10, 2021

 ಮಹಾರಾಷ್ಟ್ರ: ಮುಂಬೈ ಮತ್ತು ಮಹಾರಾಷ್ಟ್ರದ ಇತರ ಭಾಗಗಳಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ಮಧ್ಯೆ, ಮಾರಣಾಂತಿಕ ವೈರಸ್ ಹರಡುವುದನ್ನು ತಡೆಯಲು ಸಿಎಂ ಉದ್ಧವ್ ಠಾಕ್ರೆ ಶೀಘ್ರದಲ್ಲೇ ರಾಜ್ಯದಲ್ಲಿ 15 ದಿನಗಳ ಸಂಪೂರ್ಣ ಲಾಕ್ ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಹೊರಬೀದಿದ್ದೆ.

ಈ ಕುರಿತು ಸಿಎಂ ಠಾಕ್ರೆ(Uddhav Thackeray) ಕೋವಿಡ್ ಟಾಸ್ಕ್ ಪೋರ್ಸ್ ಜೊತೆ ಸಭೆ ನಡೆಸಿದ ನಂತರ ಈ ಬಗ್ಗೆ ನಿರ್ಧಾರ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ನಿನ್ನೆ ಸಿಎಂ ಠಾಕ್ರೆ ಸರ್ವಪಕ್ಷ ಸಭೆ ನಡೆಸಿ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಲಾಕ್‌ಡೌನ್( Lockdown) ಹೇರುವುದು ಮುಖ್ಯವಾಗಿದೆ ಏಕೆಂದರೆ ಅದು 'ನಮ್ಮಲಿ ಉಳಿದಿರುವ ಏಕೈಕ ಮಾರ್ಗ ಅದೇ ಎಂದು ಹೇಳಿದ್ದಾರೆ.

"ರಾಜ್ಯದ ಜನರ ಆರೋಗ್ಯಕ್ಕೆ ಆದ್ಯತೆ ನೀಡುವ ಮೂಲಕ, ರಾಜ್ಯ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳ ಮೇಲೆ ನಿಂತಿದೆ. ಅದಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವಂತೆ ನಾನು ಪಕ್ಷದ ಎಲ್ಲ ಮುಖಂಡರಿಗೆ ಮನವಿ ಮಾಡುತ್ತೇನೆ. ನಾನು ವಿವಿಧ ಕ್ಷೇತ್ರಗಳ ಜನರ ಮಾತುಕತೆ ನಡೆಸುತ್ತೇನೆ. ಶುಕ್ರವಾರ ನಾನು ಖಾಸಗಿ ಆಸ್ಪತ್ರೆಗಳ ನಿರ್ದೇಶಕರೊಂದಿಗೆ ಮಾತನಾಡಿದ್ದೇನೆ. ಎಲ್ಲರೂ ಸರ್ಕಾರದೊಂದಿಗೆ ಸಹಕರಿಸಲು ಸಿದ್ಧರಿದ್ದಾರೆ. ಟಾಸ್ಕ್ ಪೋರ್ಸ್ ಸದಸ್ಯರ ಅಭಿಪ್ರಾಯಗಳನ್ನು ಸಹ ಪರಿಗಣಿಸಲಾಗುತ್ತಿದೆ "ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ ಮತ್ತು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್(Devendra Fadnavis), ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಹೇರುವುದನ್ನು ನಮ್ಮ ಪಕ್ಷ ವಿರೋಧಿಸುತ್ತಿಲ್ಲ ಆದರೆ ನಿರ್ಧಾರ ತೆಗೆದುಕೊಳ್ಳುವ ಮೊದಲು ರಾಜ್ಯ ಸರ್ಕಾರ ಸರಿಯಾದ ಯೋಜನೆಯನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು. ಸರ್ವಪಕ್ಷ ಸಭೆಗೆ ಲಾಕ್‌ಡೌನ್ ಕುರಿತು ಯಾವುದೇ ನಿರ್ಧಾರಕ್ಕೆ ಬಂದಿಲ್ಲವಾದರೂ, ಮುಖ್ಯಮಂತ್ರಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿ ಮಾಡಲಿದ್ದಾರೆ "ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.

ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಅವರು ಸೋಮವಾರ ಸಭೆ ನಡೆಸಿ ಲಾಕ್‌ಡೌನ್ ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗುವವರ ಜೀವನೋಪಾಯಕ್ಕೆ ಆರ್ಥಿಕ ಪ್ಯಾಕೇಜ್ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್(Congress) ನಾಯಕ ಅಶೋಕ್ ಚವ್ಹಾಣ, "ಲಾಕ್‌ಡೌನ್‌ನ ನೀತಿ ನಿಯಮ, ವ್ಯಾಪ್ತಿ ಮತ್ತು ಅವಧಿಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು" ಎಂದು ಹೇಳಿದರು.

ಮಹಾರಾಷ್ಟ್ರ(Maharashtra)ದಲ್ಲಿ ಶನಿವಾರ 55,411 ಹೊಸ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿದ್ದು, ಈ ವೈರಸ್‌ನಿಂದ 309 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು 53,005 ಜನರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

Related Articles

Advertisement
Previous
Next Post »