'ದ್ವಿತೀಯ PUC' ಪ್ರಾಯೋಗಿಕ ಪರೀಕ್ಷೆ : ಪದವಿ ಪೂರ್ವ ಶಿಕ್ಷಣ ಇಲಾಖೆ ಯಿಂದ ಮಾರ್ಗಸೂಚಿ ಪ್ರಕಟ : ಇಲ್ಲಿದೆ ಮಾಹಿತಿ

April 23, 2021

 


ರಂಜಿತ್ ಶೃಂಗೇರಿ

ಬೆಂಗಳೂರು : ಏ.28 ರಿಂದ ' ದ್ವಿತೀಯ ಪಿಯುಸಿ' ಪ್ರಾಯೋಗಿಕ ಪರೀಕ್ಷೆ ನಡೆಸುವಂತೆ ಸೂಚಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಕೆಲವು ಮಾರ್ಗಸೂಚಿ ಪ್ರಕಟ ಮಾಡಿದೆ.

ಏಪ್ರಿಲ್ 28 ರಿಂದ ಮೇ 18 ರವರೆಗೆ ನಡೆಯಬೇಕಿರುವ 2021 ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಉಪ ನಿರ್ದೇಶಕರುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಪ್ರಾಯೋಗಿಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಿರುವುದರಿಂದ , ವಿದ್ಯಾರ್ಥಿಗಳಿಗೆ ಈ ಬಗ್ಗೆ ಮಾಹಿತಿ ತಲುಪಿಸಲು ಕ್ರಮ ಕೈಗೊಳ್ಳುವುದು, ಯಾವುದೇ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತರಾದರೆ ಇದಕ್ಕೆ ಪ್ರಾಂಶುಪಾಲರೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
Related Articles

Advertisement
Previous
Next Post »