SSLC, PUC ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

April 07, 2021

 


ಧಾರವಾಡ: ಸುರಕ್ಷತೆಯೊಂದಿಗೆ ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯಂತೆ ಏಪ್ರಿಲ್ ಅಂತ್ಯಕ್ಕೆ ಕೊರೊನಾ ಸೋಂಕು ಏರಿಕೆಯಾಗಿ ಮೇ ಅಂತ್ಯಕ್ಕೆ ಕಡಿಮೆಯಾಗಲಿದೆ. ಶಿಕ್ಷಣ ಇಲಾಖೆ ಧೈರ್ಯದಿಂದ ಪರೀಕ್ಷೆ ನಡೆಸಲು, ಮಕ್ಕಳು ಪರೀಕ್ಷೆ ಎದುರಿಸಲು ಸಿದ್ಧವಾಗಬೇಕು ಎಂದು ತಿಳಿಸಿದ್ದಾರೆ‌.

ಮೇ ಮತ್ತು ಜೂನ್ ನಲ್ಲಿ ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ರೀತಿಯ ಸುರಕ್ಷತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಮೇ 24 ರಿಂದ ಜೂನ್ 16 ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ಜೂನ್ 21 ರಿಂದ ಜುಲೈ 5 ರ ವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಯಲಿದೆ. ಎಲ್ಲ ಸುರಕ್ಷತೆ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Related Articles

Advertisement
Previous
Next Post »