15 ದಿನ ಮೊದಲು `ದ್ವಿತೀಯ PUC' ಪರೀಕ್ಷಾ ದಿನಾಂಕ ಪ್ರಕಟ : ಸಚಿವ ಸುರೇಶ್ ಕುಮಾರ್

May 05, 2021
Wednesday, May 5, 2021


 ಬೆಂಗಳೂರು : ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದೂಡಿಕೆಯಾಗಿರುವ ದ್ವಿತೀಯ ಪಿಯು ಪರೀಕ್ಷೆಗಳ ದಿನಾಂಕಗಳನ್ನು 15 ದಿನಗಳ ಮೊದಲು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯ ಯೂ-ಟ್ಯೂಬ್ ಚಾನಲ್ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದೂ ಅವರು ತಿಳಿಸಿದರು.


Thanks for reading 15 ದಿನ ಮೊದಲು `ದ್ವಿತೀಯ PUC' ಪರೀಕ್ಷಾ ದಿನಾಂಕ ಪ್ರಕಟ : ಸಚಿವ ಸುರೇಶ್ ಕುಮಾರ್ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on 15 ದಿನ ಮೊದಲು `ದ್ವಿತೀಯ PUC' ಪರೀಕ್ಷಾ ದಿನಾಂಕ ಪ್ರಕಟ : ಸಚಿವ ಸುರೇಶ್ ಕುಮಾರ್

Post a Comment