ಜುಲೈ 1ರಿಂದ ಪುನಃ ಆನ್​ಲೈನ್ ತರಗತಿ ಪ್ರಾರಂಭ: ಮಕ್ಕಳ ಬಳಿ ಸ್ಮಾರ್ಟ್​ಫೋನ್​ನಂತಹ ಅಗತ್ಯ ಸೌಲಭ್ಯ ಇದೆಯೇ ಎಂದು ಪ್ರಶ್ನಿಸಿದ ಹೈಕೋರ್ಟ್​

June 08, 2021
Tuesday, June 8, 2021

 


ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್​ನಲ್ಲಿ ಪಾಠ ಕೇಳಲು ಸ್ಮಾರ್ಟ್ ಫೋನ್, ಕಂಪ್ಯೂಟರ್, ಲ್ಯಾಪ್‌ಟಾಪ್, ಟ್ಯಾಬ್, ಇಂಟರ್‌ನೆಟ್‌ ಸೌಲಭ್ಯ ಹೊಂದಿರುವ ಮಕ್ಕಳ ಸಂಖ್ಯೆ ಎಷ್ಟು? ಎಂದು ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಪ್ರಶ್ನೆ ಮಾಡಿದೆ. ಆನ್​ಲೈನ್ ಕ್ಲಾಸ್​ಗೆ ಕೂರಲು ಅಗತ್ಯ ಸೌಲಭ್ಯ ಹೊಂದಿರುವ ಮಕ್ಕಳ ಶಾಲಾವಾರು ಅಂಕಿ ಅಂಶವನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಆನ್​ಲೈನ್ ತರಗತಿಗಳಿಗೆ ಕೂರಲು ತಂತ್ರಜ್ಞಾನದ ಲಭ್ಯತೆ ಬಗ್ಗೆ ಶಾಲಾವಾರು ಅಂಕಿ-ಅಂಶಗಳನ್ನು ಜುಲೈ1ರೊಳಗೆ ಒದಗಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ಹೈಕೋರ್ಟ್​ಗೆ ಕೆಲವು ಮುಖ್ಯ ಮಾಹಿತಿಗಳನ್ನು ತಿಳಿಸಿದ ರಾಜ್ಯ ಸರ್ಕಾರ, 2021-22ನೇ ಶೈಕ್ಷಣಿಕ ವರ್ಷ ಆರಂಭಕ್ಕೆ ಕಾರ್ಯಯೋಜನೆಯನ್ನು ವಿವರಿಸಿದೆ.

ಜುಲೈ 1ರಿಂದ ಆನ್​ಲೈನ್ ತರಗತಿಗಳನ್ನು ಪುನಃ ಆರಂಭಿಸಲು ಸಿದ್ಧತೆ ನಡೆಸಲಾಗಿದೆ. ಲಾಕ್​ಡೌನ್ ಪರಿಣಾಮ ಪಠ್ಯಪುಸ್ತಕಗಳನ್ನು ಮುದ್ರಿಸಲು ವಿಳಂಬವಾಗಿದೆ. ಆಗಸ್ಟ್, ಸೆಪ್ಟಂಬರ್ ತಿಂಗಳಲ್ಲಿ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುತ್ತದೆ ಎಂದು ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಲಾಕ್‌ಡೌನ್ ವೇಳೆ ಸೀಜ್ ಮಾಡಿದ್ದ ವಾಹನಗಳ ರಿಲೀಸ್ ಮಾಡಲು ಹೈಕೋರ್ಟ್ ಆದೇಶ
ಕೊರೊನಾ ಸೋಂಕನ್ನು ಲಾಕ್​ ಮಾಡಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ. ಆದರೆ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ಕಟ್ಟಿಸಿಕೊಂಡು ಬಿಡುವಂತೆ ಹೈಕೋರ್ಟ್ ಸೂಚಿಸಿದೆ. ವಾಹನ ಸವಾರರು ವಾಹನ ರಿಲೀಸ್‌ ಮಾಡಿಸಿಕೊಳ್ಳಲು ಕೋರ್ಟ್‌ಗೆ ಓಡಾಡುವ ಅಗತ್ಯವಿಲ್ಲ. ಪೊಲೀಸರಿಗೇ ವಾಹನ ರಿಲೀಸ್ ಮಾಡುವ ಅಧಿಕಾರವನ್ನೂ ಹೈಕೋರ್ಟ್ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡಿ…
ಕೊರೊನಾ ಸೋಂಕನ್ನು ನಿಯಂತ್ರಿಸಲು ಜಾರಿಯಲ್ಲಿದ್ದ ಲಾಕ್‌ಡೌನ್ ವೇಳೆ ನಿಯಮ ಉಲ್ಲಂಘಿಸಿದವರಿಂದ ಪೊಲೀಸರು ಲಕ್ಷಾಂತರ ವಾಹನಗಳನ್ನು ಸೀಜ್ ಮಾಡಿದ್ದರು. ಇದರಿಂದ ಠಾಣೆಗಳ ಆವರಣದಲ್ಲಿ ವಾಹನ ನಿಲುಗಡೆಗೆ ಸ್ಥಳವಿಲ್ಲದೇ ಸಮಸ್ಯೆಯಾಗಿತ್ತು. ಈ ಬಗ್ಗೆ ಸೂಕ್ತ ನಿರ್ದೇಶನ ಕೋರಿ ರಾಜ್ಯ ಸರ್ಕಾರ ಕೋರ್ಟ್​ ಮೊರೆ ಹೋಗಿತ್ತು. ಸರ್ಕಾರದಿಂದ ಅರ್ಜಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಇಂದು ಈ ಆದೇಶ ನೀಡಿದೆ.

ರಾಜ್ಯದಲ್ಲಿ ವಶಪಡಿಸಿಕೊಂಡಿದ್ದ ಅಷ್ಟೂ ವಾಹನಗಳನ್ನು ರಿಲೀಸ್​ ಮಾಡುವಂತೆ ಹೈಕೋರ್ಟ್​ ಸೂಚನೆ ನೀಡಿದೆ. ವಾಹನ ಮಾಲೀಕರು ಕೋರ್ಟ್​​ಗಳತ್ತ ಬಂದು ಜನಸಂದಣಿ ಆಗುವುದು ಬೇಡ. ಜನ ಜಮಾವಣೆಯಾದರೆ ಮತ್ತೆ ಕೊರೊನಾ ಸೋಂಕು ಹಬ್ಬಲು ಸಹಕಾರಿಯಾಗುತ್ತದೆ. ಹಾಗಾಗಿ ವಾಹನಗಳ ಮಾಲೀಕರಿಂದ ದಂಡ ಕಟ್ಟಿಸಿಕೊಂಡು, ಬಾಂಡ್​ ಬರೆಯಿಸಿಕೊಂಡು ಇಡೀ ರಾಜ್ಯದಲ್ಲಿ ಆಯಾ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲೇ ಕೇಸುಗಳನ್ನು ಇತ್ಯರ್ಥ ಪಡಿಸುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ.'ದ್ವಿತೀಯ PUC' ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಬೇಕು ಎಂದ ಮಾಜಿ ಸಿಎಂ ಸಿದ್ದರಾಮಯ್ಯ


ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಪರೀಕ್ಷೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೊರೊನಾ ಭೀತಿ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.

'ಶಿಕ್ಷಣ ಸಚಿವ ಸುರೇಶ್ ಕುಮಾರ್ ಪಾಪ..ಅವರಿಗೆ ಪಾಪ ಎನ್ನಬೇಕೋ.. ಏನ್ ಅನ್ನಬೇಕೋ ಗೊತ್ತಿಲ್ಲ.ಅವರದ್ದು ಸ್ವಂತ ಅಭಿಪ್ರಾಯ ಯಾವುದ್ದೂ ಇರಲ್ಲ..ಪಿಯಸಿ ಪರೀಕ್ಷೆ ಮುಂದಕ್ಕೆ ಹಾಕುತ್ತಾರೆ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುತ್ತಾರೆ, ನನ್ನ ಪ್ರಕಾರ ಇದು ಸರಿಯಲ್ಲ..ಇವುಗಳಲ್ಲಿ ಯಾವುದು ಮುಖ್ಯ.?

ರಾಜ್ಯ ಸರ್ಕಾರಕ್ಕೆ ಬುದ್ದಿ ಬೇಡವಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನನ್ನ ಪ್ರಕಾರ ಎಸ್ ಎಸ್ ಎಲ್ ಸಿ, ಪಿಯುಸಿ ಹಾಗೂ ಸಿಇಟಿ ಪರೀಕ್ಷೆ ನಡೆಸಬೇಕಿತ್ತು, ಸರ್ಕಾರ ಮುಂಚೆಯೇ ಇದಕ್ಕೆ ಸಿದ್ದತೆ ಮಾಡಿಕೊಳ್ಳಬೇಕಿತ್ತು ಎಂದು ಹೇಳಿದರು.Thanks for reading ಜುಲೈ 1ರಿಂದ ಪುನಃ ಆನ್​ಲೈನ್ ತರಗತಿ ಪ್ರಾರಂಭ: ಮಕ್ಕಳ ಬಳಿ ಸ್ಮಾರ್ಟ್​ಫೋನ್​ನಂತಹ ಅಗತ್ಯ ಸೌಲಭ್ಯ ಇದೆಯೇ ಎಂದು ಪ್ರಶ್ನಿಸಿದ ಹೈಕೋರ್ಟ್​ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಜುಲೈ 1ರಿಂದ ಪುನಃ ಆನ್​ಲೈನ್ ತರಗತಿ ಪ್ರಾರಂಭ: ಮಕ್ಕಳ ಬಳಿ ಸ್ಮಾರ್ಟ್​ಫೋನ್​ನಂತಹ ಅಗತ್ಯ ಸೌಲಭ್ಯ ಇದೆಯೇ ಎಂದು ಪ್ರಶ್ನಿಸಿದ ಹೈಕೋರ್ಟ್​

Post a Comment