BIGG NEWS: 'ಎಣ್ಣೆ' ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ 'ಮದ್ಯ' ಖರೀದಿ ಸಮಯ ವಿಸ್ತರಣೆ

June 19, 2021
Saturday, June 19, 2021

 


ಬೆಂಗಳೂರು : ರಾಜ್ಯದಲ್ಲಿ ಶೇ. 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲಾಗುತ್ತಿದೆ. ಇನ್ನುಳಿದಂತೆ ಪಾಸಿಟಿವಿಟಿ ದರಗಳು ಹೆಚ್ಚಿರುವಂತ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲಾಗುತ್ತಿದೆ.. ಜುಲೈ 5 ರವರೆಗೆ ಈ ಮಾರ್ಗಸೂಚಿ ಕ್ರಮಗಳು ಜಾರಿಯಲ್ಲಿದ್ದು ನೈಟ್ ಹಾಗೂ ವಾರಾಂತ್ಯ ಕರ್ಪ್ಯೂ ರಾಜ್ಯಾಧ್ಯಂತ ಮುಂದುವರೆಯಲಿದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ರಾಜ್ಯದಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವಂತ 16 ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರದಿಂದ ಮದ್ಯ ಖರೀದಿ ಸಮಯ ಸಂಜೆ 5 ಗಂಟೆವರೆಗೆ ವಿಸ್ತರಣೆ ಮಾಡಲಾಗಿದ್ದು, ಪಾರ್ಸೆಲ್ ಗೆ ಮಾತ್ರ ಅವಕಾಶ ನೀಡಲಾಗಿದೆ.

ಬಾರ್ ಗಳಲ್ಲಿ ಕುಳಿತು ಮದ್ಯ ಸೇವಿಸುವ ಹಾಗಿಲ್ಲ ಎಂಬ ಕಂಡೀಷನ್ ನೊಂದಿಗೆ ಸಂಜೆ 5 ಗಂಟೆವರೆಗೆ ಗ್ರಾಹಕರು ಮದ್ಯ ಖರೀದಿಸಬಹುದು. ಎಸಿ ಚಾಲನೆಗೊಳಿಸದೇ ಹೋಟೆಲ್, ಕ್ಲಬ್, ರೆಸ್ಟೋರೆಂಟ್ ಗಳಲ್ಲಿ ಮಧ್ಯಪಾನ ಹೊರತುಪಡಿಸಿ ಸಂಜೆ 5 ಗಂಟೆಯವರೆಗೆ ಶೇ.50ರಷ್ಟು ಜನರನ್ನು ಒಳಗೊಂಡು ತೆರೆಯೋದಕ್ಕೆ ಅವಕಾಶ ನೀಡಲಾಗಿದೆ.

ಈ ಕುರಿತಂತೆ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಕೋವಿಡ್ ಉಸ್ತುವಾರಿ ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವ್ ದರ ಇದೆ. 13 ಜಿಲ್ಲೆಗಳಲ್ಲಿ 5-10 ಇದೆ. ಮೈಸೂರು ಜಿಲ್ಲೆಯಲ್ಲಿ 10ಕ್ಕಿಂತ ಹೆಚ್ಚು ಇದೆ. ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಭಂಧಗಳ ಸಡಿಲಿಕೆಯ ಆಧಾರ ಮೇಲೆ, ಶೇ.5ಕ್ಕಿಂತ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಸೇರಿದಂತೆ ಗದಗ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ, ಸಡಿಲಿಕೆ ಮಾಡಲು ತೀರ್ಮಾನಿಸಲಾಗಿದೆ.

Thanks for reading BIGG NEWS: 'ಎಣ್ಣೆ' ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ 'ಮದ್ಯ' ಖರೀದಿ ಸಮಯ ವಿಸ್ತರಣೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on BIGG NEWS: 'ಎಣ್ಣೆ' ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ 'ಮದ್ಯ' ಖರೀದಿ ಸಮಯ ವಿಸ್ತರಣೆ

Post a Comment