ಶಿಕ್ಷಕಿಯರಿಗೆ ಗುಡ್ ನ್ಯೂಸ್: ಮನೆಯಿಂದಲೇ ಕೆಲಸಕ್ಕೆ ಅವಕಾಶ

June 15, 2021
Tuesday, June 15, 2021

 


ಬೆಂಗಳೂರು : ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಅಂತರ್‌ ಜಿಲ್ಲಾ ಶಿಕ್ಷಕರಿಗೆ ಶಾಲೆಗಳಿಗೆ ಹಾಜರಾಗಲು ಕಾಲಾವಕಾಶ ನೀಡಿದ್ದ ಶಿಕ್ಷಣ ಇಲಾಖೆಯು ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸಂಚಾರಕ್ಕೆ ಅನುಕೂಲ ಇಲ್ಲದ ಶಿಕ್ಷಕಿಯರಿಗೂ ವಿನಾಯಿತಿ ನೀಡಿದೆ.

ಏಕೋಪಾಧ್ಯಾಯ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕಿಯರನ್ನು ಬಿಟ್ಟು ಸಂಚಾರ ವ್ಯವಸ್ಥೆ ಇಲ್ಲದ ಎಲ್ಲ ಶಿಕ್ಷಕಿಯರು ಜೂ. 21ರ ವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಲಾಕ್‌ಡೌನ್‌ ಇರುವ ಜಿಲ್ಲೆಗಳು ಮತ್ತು ಸಂಚಾರಕ್ಕೆ ವ್ಯವಸ್ಥೆ ಇಲ್ಲದ ಶಿಕ್ಷಕರು ಮನೆಯಿಂದಲೇ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಲಾಕ್‌ ತೆರವುಗೊಳಿಸಿರುವ ಜಿಲ್ಲೆಗಳಲ್ಲಿ ಪ್ರಸ್ತುತ ಇರುವ ಶಿಕ್ಷಕರು ಮಾತ್ರ ಜೂ. 15ರಿಂದಲೇ ಕಾರ್ಯ ಪ್ರವೃತ್ತರಾಗಬೇಕು.

ಪುನರಾವರ್ತಿತ ವಿದ್ಯಾರ್ಥಿಗಳಿಗೇಕೆ ಬೇರೆ ನ್ಯಾಯ: ಹೈಕೋರ್ಟ್‌ ಪ್ರಶ್ನೆ
ದ್ವಿತೀಯ ಪಿಯುಸಿಯ ಪುನರಾವರ್ತಿತ ವಿದ್ಯಾರ್ಥಿಗಳನ್ನೂ ಪರೀಕ್ಷೆ ಇಲ್ಲದೆ ತೇರ್ಗಡೆ ಮಾಡುವ ಬಗ್ಗೆ ನಿಲುವು ತಿಳಿಸುವಂತೆ ಹೈಕೋರ್ಟ್‌ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸುವ ಸರಕಾರದ ನಿರ್ಧಾರ ರದ್ದು ಮಾಡುವಂತೆ ಬೆಂಗಳೂರಿನ ಜ್ಞಾನಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಎಸ್‌.ವಿ. ಸಿಂಗ್ರೇಗೌಡ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಪೀಠ ರಾಜ್ಯ ಸರಕಾರಕ್ಕೆ ಈ ನಿರ್ದೇಶನ ನೀಡಿದೆ.

ಅರ್ಜಿದಾರರ ವಾದ
ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣಗೊಳಿಸಲು ಸರಕಾರ ತೀರ್ಮಾನಿಸಿದೆ. ಇದನ್ನು ಪುನರಾವರ್ತಿತ ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು. ಇಲ್ಲವಾದರೆ ತಾರತಮ್ಯ ಮಾಡಿದಂತಾಗುತ್ತದೆ ಎಂದು ಅರ್ಜಿದಾರರು ಕೋರಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸರಕಾರಕ್ಕೆ ಸೂಚಿಸಿದ ಪೀಠ, ಜೂ.17ಕ್ಕೆ ವಿಚಾರಣೆ ಮುಂದೂಡಿದೆ.
ಹೈಕೋರ್ಟ್‌ ಆದೇಶದ ಬಗ್ಗೆ ಪರಿಶೀಲನೆ ನಡೆಸಿ ಸರಕಾರದ ನಿಲುವನ್ನು ತಿಳಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

Thanks for reading ಶಿಕ್ಷಕಿಯರಿಗೆ ಗುಡ್ ನ್ಯೂಸ್: ಮನೆಯಿಂದಲೇ ಕೆಲಸಕ್ಕೆ ಅವಕಾಶ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಶಿಕ್ಷಕಿಯರಿಗೆ ಗುಡ್ ನ್ಯೂಸ್: ಮನೆಯಿಂದಲೇ ಕೆಲಸಕ್ಕೆ ಅವಕಾಶ

Post a Comment