ಮಹಿಳೆ ಮೇಲೆ ಗ್ಯಾಂಗ್ ರೇಪ್: ಮುಖವನ್ನ ಇಟ್ಟಿಗೆಯಿಂದ ಹೊಡೆದ್ರು..!ಮುಂದೇನಾಯ್ತು..?

June 12, 2021
Saturday, June 12, 2021

 


ರೋಹ್ಟಕ್ : 23 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ನಂತರ ಬರ್ಬರವಾಗಿ ಕೊಲೆ ಮಾಡಿರೋ ಬೆಚ್ಚಿಬೀಳಿಸೋ ಘಟನೆ ಹರಿಯಾಣದಲ್ಲಿ ಬೆಳಕಿಗೆ ಬಂದಿದೆ. ಇಲ್ಲಿನ ರೋಹ್ಟಕ್‍ನ ಅರ್ಬನ್ ಎಸ್ಟೇಟ್ ಪ್ರದೇಶದಲ್ಲಿ ತುಂಡರಿಸಿದ ಮಹಿಳೆಯ ದೇಹವನ್ನ ವ್ಯಕ್ತಿಯೊಬ್ಬರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಮುಖ ಹಾಗೂ ದೇಹದ ಕೆಳಭಾಗವನ್ನ ನಾಯಿಗಳು ತಿಂದುಹಾಕಿದ್ದವು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಿತ್ ಹಾಗೂ ವಿಕಾಸ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಸುಮಿತ್ ಮೃತ ಮಹಿಳೆಯ ನೆರೆಮನೆಯವನು ಎಂದು ಸೋನಿಪತ್‍ನ ಸಬ್ ಇನ್ಸ್‍ಪೆಕ್ಟರ್ ಅಜಯ್ ಮಲಿಕ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಕೊಲೆಗೀಡಾದ ಮಹಿಳೆ ವಿಚ್ಛೇದಿತರಾಗಿದ್ದು, ಆಕೆಯನ್ನ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ರೋಹ್ಟಕ್‍ಗೆ ಕರೆದುಕೊಂಡು ಹೋಗಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಹಿಳೆಯ ಪೋಷಕರು ಸೋನಿಪತ್ ಪೊಲೀಸ್ ಠಾಣೆಯಲ್ಲಿ ಮಗಳು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ನಂತರ ಆರೋಪಿಗಳು ಇಟ್ಟಿಗೆಯಿಂದ ಆಕೆಗೆ ಹೊಡೆದಿದ್ದಾರೆ. ಅಲ್ಲದೆ ಮುಖವನ್ನ ಕಲ್ಲಿಗೆ ಗುದ್ದಿದ್ದಾರೆ. ಮೃತ ಮಹಿಳೆಯ ತಲೆಗೆ ತೀವ್ರವಾಗಿ ಗಾಯವಾಗಿರುವುದು ಪತ್ತೆಯಾಗಿದೆ ಎಂದು ಮಲಿಕ್ ತಿಳಿಸಿದ್ದಾರೆ.

Thanks for reading ಮಹಿಳೆ ಮೇಲೆ ಗ್ಯಾಂಗ್ ರೇಪ್: ಮುಖವನ್ನ ಇಟ್ಟಿಗೆಯಿಂದ ಹೊಡೆದ್ರು..!ಮುಂದೇನಾಯ್ತು..? | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಮಹಿಳೆ ಮೇಲೆ ಗ್ಯಾಂಗ್ ರೇಪ್: ಮುಖವನ್ನ ಇಟ್ಟಿಗೆಯಿಂದ ಹೊಡೆದ್ರು..!ಮುಂದೇನಾಯ್ತು..?

Post a Comment