ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಎಲ್ಲರಿಗೂ ನಿವೇಶನ, ಮನೆ ಒದಗಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ

June 13, 2021
Sunday, June 13, 2021


 ಶಿವಮೊಗ್ಗ: ಮುಂದಿನ ಎರಡು ವರ್ಷದಲ್ಲಿ ನಿವೇಶನ ರಹಿತರೆಲ್ಲರಿಗೂ ಮನೆ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿಗೆ ತೆರಳುವ ಮೊದಲು ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ನಿವೇಶನವಿಲ್ಲವೋ ಅಂತವರು ಹೌಸಿಂಗ್ ಬೋರ್ಡ್ ಅಧಿಕಾರಿಗಳನ್ನು ಭೇಟಿಯಾಗಿ ನಿವೇಶನ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಯಾವುದೇ ಕುಟುಂಬಕ್ಕೆ ನಿವೇಶನ ಇಲ್ಲದೆ ಇರಬಾರದು ಎನ್ನುವ ಪ್ರಧಾನಿ ಮೋದಿ ಅವರ ಅಪೇಕ್ಷೆಯಂತೆ ಇನ್ನು ಎರಡು ವರ್ಷದಲ್ಲಿ ನಿವೇಶನರಹಿತರಿಗೆ ನಿವೇಶನ ನೀಡಲಾಗುವುದು. ಇಡೀ ರಾಜ್ಯದಲ್ಲಿ ನಿವೇಶನ ಇಲ್ಲದೆ ಇರುವ ವ್ಯಕ್ತಿ ಇರಬಾರದು ಎಂಬುದು ಸರ್ಕಾರದ ಅಪೇಕ್ಷೆಯಾಗಿದೆ. ಮುಂದಿನ ಎರಡು ವರ್ಷದಲ್ಲಿ ನಿವೇಶನ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಶಿಕ್ಷಕರಿಗೆ ರಜೆ ವಿಸ್ತರಣೆ: ಇಲ್ಲಿದೆ ನೋಡಿ ಇಂದಿನ ಸಂಪೂರ್ಣ ಮಾಹಿತಿ

ದೇವರ ದಯೆಯಿಂದ ಉತ್ತಮ ಮುಂಗಾರು ಬಿತ್ತನೆ ಕಾರ್ಯ ಆರಂಭವಾಗಿದೆ. ಉತ್ತಮ ಬೆಳೆಯನ್ನು ಬೆಳೆದು ರೈತರು ನೆಮ್ಮದಿಯಿಂದ ಬದುಕುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Thanks for reading ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಎಲ್ಲರಿಗೂ ನಿವೇಶನ, ಮನೆ ಒದಗಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ: ಎಲ್ಲರಿಗೂ ನಿವೇಶನ, ಮನೆ ಒದಗಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ

Post a Comment