ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

June 11, 2021
Friday, June 11, 2021

 


ಬೆಂಗಳೂರು: ಗ್ರಾಮೀಣ ಬ್ಯಾಂಕ್ ಗಳ ಖಾಲಿ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ನಡೆಸಲು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS) ಅವಕಾಶ ನೀಡಿತ್ತಾದರೂ, ರಾಜ್ಯದಲ್ಲಿ ಹುದ್ದೆಗಳು ಖಾಲಿ ಇರಲಿಲ್ಲ. ಈಗ ಪರಿಷ್ಕೃತ ಅಧಿಸೂಚನೆ ಹೊರಡಿಸಲಾಗಿದ್ದು, ರಾಜ್ಯದಲ್ಲಿರುವ 478 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ರಾಜ್ಯದ ಎರಡು ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ 478 ಹುದ್ದೆಗಳಿಗೆ ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ಪ್ರಿಲಿಮ್ಸ್ ಮತ್ತು ಮೇನ್ ಪರೀಕ್ಷೆ ಬರೆಯಬಹುದು. 12 ಜಿಲ್ಲಾ ಕೇಂದ್ರಗಳಲ್ಲಿ ಪ್ರಿಲಿಮ್ಸ್, 9 ಜಿಲ್ಲಾ ಕೇಂದ್ರಗಳಲ್ಲಿ ಮೇನ್ ಪರೀಕ್ಷೆ ಆನ್ಲೈನ್ನಲ್ಲಿ ನಡೆಯಲಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ನಲ್ಲಿ ಕಾರ್ಯ ನಿರ್ವಹಿಸುವ ಜ್ಞಾನ ಹೊಂದಿರಬೇಕು. 18 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ 160 ಆಫೀಸ್ ಅಸಿಸ್ಟೆಂಟ್, 87 ಆಫೀಸರ್(ಸ್ಕೇಲ್ -1), ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಲ್ಲಿ 101 ಆಫೀಸ್ ಅಸಿಸ್ಟೆಂಟ್, 130 ಆಫೀಸರ್(ಸ್ಕೇಲ್ -1) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿವರಗಳಿಗಾಗಿ www.ibps.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

Thanks for reading ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

Post a Comment