ರಾತ್ರಿ ಊಟ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದರಿಂದ ಉಂಟಾಗುವ ಸಮಸ್ಯೆ ಬಗ್ಗೆ ಗಮನಿಸಿ

June 21, 2021
Monday, June 21, 2021

 


ಕೆಲಸದ ಒತ್ತಡ, ಆರ್ಥಿಕ ಹೊರೆ, ಇನ್ನಿತರ ಸಮಸ್ಯೆಗಳಿಂದ ಪ್ರತಿದಿನ ಹಲವರು ಮಿಷನ್​ನಂತೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹೆಚ್ಚು ಸೂಕ್ತವಾಗಿದೆ. ಕಾರಣ ಮನಸ್ಸು ಮತ್ತು ದೇಹದ ಸಮತೋಲವನ್ನು ಕಾಯ್ದುಕೊಳ್ಳಲು ಯಾವಾಗಲೂ ಪೌಷ್ಠಿಕ ಆಹಾರವನ್ನು ತೆಗೆದುಕೊಳ್ಳಬೇಕು. ವೈದ್ಯರು ಕೂಡ ಇದನ್ನೇ ಹೇಳುತ್ತಾರೆ. ಆದರೆ ಆಹಾರ ಸೇವಿಸುವ ಸಮಯದ ಬಗ್ಗೆ ಹಲವರಲ್ಲಿ ಗೊಂದಲಗಳಿದೆ. ಅದರಲ್ಲೂ ರಾತ್ರಿ ಊಟ ಮಾಡುವಾಗ ವಿಶೇಷ ಕಾಳಜಿ ಅಗತ್ಯ. ಕೆಲವರು ಸ್ನಾನ ಮಾಡಿ ಊಟ ಮಾಡುತ್ತಾರೆ. ಮತ್ತೆ ಕೆಲವರಿಗೆ ಊಟ ಮಾಡಿದ ಕೂಡಲೆ ಮಲಗುವ ಅಭ್ಯಾಸವಿದೆ. ಹೀಗೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ತಜ್ಞರು ಸೂಚಿಸುತ್ತಾರೆ. ಹಾಗಿದ್ದರೆ ಯಾವೆಲ್ಲಾ ಸಮಸ್ಯೆಗಳು ಎದುರಾಗುತ್ತದೆ ಎಂಬ ಪ್ರಶ್ನೆ ನಿಮ್ಮಲ್ಲಿದ್ದರೆ ಅದಕ್ಕೆ ಉತ್ತರ ಹೀಗಿದೆ.

ರಾತ್ರಿ ಊಟ ಮಾಡಿದ ಕೂಡಲೇ ಸ್ನಾನ ಮಾಡುವುದರಿಂದ ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತದೆ. ಇದಲ್ಲದೆ, ಹೊಟ್ಟೆ ನೋವು ಮತ್ತು ಸೆಳೆತದಂತಹ ಸಮಸ್ಯೆಗಳ ಸಾಧ್ಯತೆಯಿದೆ.

ಊಟ ಮಾಡಿದ ನಂತರ ಸ್ನಾನ ಮಾಡುವುದು ಒಳ್ಳೆಯದೋ? ಅಥವಾ ಕೆಟ್ಟದ್ದೋ?
ರಾತ್ರಿ ಊಟ ಮಾಡಿದ ನಂತರ ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ದೇಹದ ಉಷ್ಣತೆ ಹೆಚ್ಚಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಇದರ ಪರಿಣಾಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಉಂಟಾಗುತ್ತದೆ. ಇದರಿಂದಾಗಿ ವಾಂತಿ, ಹುಣ್ಣು, ಆಮ್ಲೀಯತೆ ಮತ್ತು ಇತರ ಆರೋಗ್ಯ ಸಮಸ್ಯೆಗಳು ಸೃಷ್ಟಿಯಾಗುವ ಸಾಧ್ಯತೆ ಇದೆ. ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ನಾಡಿ ದರವೂ ಹೆಚ್ಚಾಗುತ್ತದೆ. ಇದು ಮೂಳೆ ಸೆಳೆತ ಮತ್ತು ನೋವಿನಂತಹ ಸಮಸ್ಯೆಗಳಿಗೆ ಕಾರಣವಾಗಬಹುದು.

ಊಟದ ನಂತರ ತಣ್ಣಗಿನ ನೀರಿನಲ್ಲಿ ಸ್ನಾನ ಮಾಡಬಹುದೇ?
ಆಹಾರ ಸೇವಿಸಿದ ನಂತರ ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವ ಬದಲು ನೀವು ತಣ್ಣಗಿನ ನೀರಿನಿಂದ ಸ್ನಾನ ಮಾಡಬಹುದು ಎಂದು ತಜ್ಞರು ಹೇಳಿದ್ದಾರೆ. ತಣ್ಣಗಿನ ನೀರಿನಲ್ಲಿ ಸ್ನಾನ ಮಾಡುವುದರಿಂದ ದೇಹದ ಉಷ್ಣಾಂಶದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಮತ್ತು ನಿಮ್ಮ ಜೀರ್ಣಾಂಗ ವ್ಯವಸ್ಥೆಯು ಸಾಮಾನ್ಯವಾಗಿರುತ್ತದೆ. ಸೇವಿಸುವ ಆಹಾರದಲ್ಲಿನ ಕೆಟ್ಟ ಕೊಬ್ಬನ್ನು ಕರಗಿಸಲು ಸಹ ಇದು ಸಹಾಯ ಮಾಡುತ್ತದೆ. ಆದಾಗ್ಯೂ, ಊಟ ಮಾಡಿ ಸುಮಾರು 20 ನಿಮಿಷಗಳ ನಂತರ ಸ್ನಾನ ಮಾಡುವುದು ಉತ್ತಮ ಎಂದು ವೈದ್ಯರು ತಿಳಿಸಿದ್ದಾರೆ. ರಾತ್ರಿ ಊಟದ ನಂತರ ನೀವು 30 ನಿಮಿಷಗಳ ಕಾಲ ಬೇರೆ ಕೆಲಸದಲ್ಲಿ ನಿರತರಾಗಬಹುದು, ಬ್ರಷ್ ಮಾಡಬಹುದು ಎಂದು ವೈದ್ಯರು ಸಲಹೆ ನೀಡಿದ್ದಾರೆ.

Thanks for reading ರಾತ್ರಿ ಊಟ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದರಿಂದ ಉಂಟಾಗುವ ಸಮಸ್ಯೆ ಬಗ್ಗೆ ಗಮನಿಸಿ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ರಾತ್ರಿ ಊಟ ಮಾಡಿದ ಬಳಿಕ ಸ್ನಾನ ಮಾಡುವ ಅಭ್ಯಾಸ ಇದೆಯೇ? ಹಾಗಿದ್ದರೆ ಅದರಿಂದ ಉಂಟಾಗುವ ಸಮಸ್ಯೆ ಬಗ್ಗೆ ಗಮನಿಸಿ

Post a Comment