ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರವೇ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

June 14, 2021
Monday, June 14, 2021

 


ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ಶಿಕ್ಷಕರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸುವ ನಿರೀಕ್ಷೆ ಇದೆ.

ಶಿಕ್ಷಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರ ಕರಡು ರೂಪಿಸಿ ಸಾರ್ವಜನಿಕರ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಒಂದು ಸಾವಿರಕ್ಕೂ ಹೆಚ್ಚಿನ ಆಕ್ಷೇಪಣೆಗಳು ಬಂದಿದ್ದು, ಇದರ ಪರಿಶೀಲನೆಯಲ್ಲಿ ಇಲಾಖೆ ತೊಡಗಿದೆ. ಈ ಕಾರ್ಯ ಒಂದೆರಡು ದಿನಗಳಲ್ಲಿ ಮುಕ್ತಾಯವಾಗಲಿದ್ದು, ನಂತರ ವೇಳಾಪಟ್ಟಿ ಮತ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಇನ್ನು ಕಳೆದ ವರ್ಷದ ವರ್ಗಾವಣೆಯಲ್ಲಿ ಹೆಚ್ಚುವರಿ ಮತ್ತು ಕಡ್ಡಾಯ ವರ್ಗಾವಣೆಗೆ ಸಿಲುಕಿದ ಶಿಕ್ಷಕರಿಗೆ ಈ ಬಾರಿ ಮೊದಲ ಆದ್ಯತೆ ಸಿಗಲಿದೆ ಎನ್ನಲಾಗಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಅಧಿನಿಯಮ 2021 ರಲ್ಲಿ ಈ ಹಿಂದೆ ಕಡ್ಡಾಯ ವರ್ಗಾವಣೆ, ವಲಯ ವರ್ಗಾವಣೆ ಅಥವಾ ಸಮರ್ಪಕ ಮರು ಹಂಚಿಕೆಯ ಮೇರೆಗೆ ಸ್ಥಳ ಆಯ್ಕೆ ಮಾಡಿಕೊಂಡ ಶಿಕ್ಷಕರಿಗೆ ವರ್ಗಾವಣೆಗೆ ಅವಕಾಶ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

Thanks for reading ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರವೇ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ | Tags:

Next Article
« Prev Post
Previous Article
Next Post »

Related Posts

Show comments
Hide comments

0 komentar on ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರವೇ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

Post a Comment