ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರವೇ ಖಾಸಗಿ ಆಸ್ಪತ್ರೆಗಳಲ್ಲಿ `ಕ್ಯಾಶ್ ಲೆಸ್' ಚಿಕಿತ್ಸೆ

 ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆಗೆ ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆ ಇದೆ.

ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ 25 ಲಕ್ಷ ಸದಸ್ಯರಿಗೆ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯದ ಅವಕಾಶ ಸಿಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಸೌಲಭ್ಯದ ಕುರಿತು ಮುಖ್ಯಮಂತ್ರಿ ಬಿ.ಎಸ್.

ಯಡಿಯೂರಪ್ಪಗೆ ಮನವಿ ಮಾಡಲಾಗಿದೆ. ಈ ಯೋಜನೆ ಜಾರಿಗೆ ತರುವ ಭರವಸೆಯನ್ನು ಸಿಎಂ ನೀಡಿದ್ದರು. ಅದರಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. ಇದರಿಂದ ಸೂಚಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನು ಕ್ಯಾನ್ಸರ್ ಪೀಡಿತ ನೌಕರರಿಗೆ ಆರು ತಿಂಗಳ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ. ಮರಣ ಹೊಂದಿದ ನೌಕರರಿಗೆ ಶವ ಸಂಸ್ಕಾರ ವೆಚ್ಚ 5 ಸಾವಿರ ರೂ.ನಿಂದ 15 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ. ಡಯಾಲಿಸಿಸ್ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ ಎಂದು ಸಿ.ಎಸ್. ಷಡಾಕ್ಷರಿ ತಿಳಿಸಿದ್ದಾರೆ.

Comments