ಬೆಂಗಳೂರು: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳಲ್ಲಿ ಬಂದ್ ಮಾಡಿರುವ 1-9ನೇ ತರಗತಿ ಪೈಕಿ 5-9ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದವು. ಅವುಗಳನ್ನು ಪುನರಾರಂಭಿಸುವ ಕುರಿತು ಶುಕ್ರವಾರ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸದ್ಯಕ್ಕೆ ಬಂದ್ ಆಗಿರುವ ಜಿಲ್ಲೆಗಳಲ್ಲಿ ಶಾಲೆಗಳ ಪುನಾರಂಭಿಸಲು ಚಿಂತನೆ ನಡೆಸಿದ್ದೇವೆ. 5ನೇ ತರಗತಿ ಮೇಲ್ಪಟ್ಟು ಶಾಲೆಗಳನ್ನು ತೆರೆಯಲು ಗಂಭೀರ ಚಿಂತನೆ ನಡೆದಿದೆ. ಮಕ್ಕಳ ಹಿತದೃಷ್ಟಿ, ಆರೋಗ್ಯ, ಪೋಷಕರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಭವಿಷ್ಯ ನಾಳೆ ನಿರ್ಧಾರ
Comments
Post a Comment