ದಾವಣಗೆರೆ : ಬೆಳ್ಳೂಡಿಯ ಒಂದೇ ಶಾಲೆಯ ಐವರು ವಿದ್ಯಾರ್ಥಿಗಳು ಸೇರಿ ಜಿಲ್ಲೆಯಲ್ಲಿ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

 


ದಾವಣಗೆರೆ : ರಾಜ್ಯದ ಶಾಲಾ-ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಗುರುವಾರ ಒಂದೇ ದಿನ ದಾವಣಗೆರೆ ಜಿಲ್ಲೆಯಲ್ಲಿ 26 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಗುರುವಾರ ಒಟ್ಟು 152 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1218 ಕ್ಕೆ ಏರಿಕೆಯಾಗಿದೆ.ಶಾಲಾ-ಕಾಲೇಜು ವಿದ್ಯಾರ್ಥಿಗಳ ಪೈಕಿ ದಾವಣಗೆರೆ ತಾಲೂಕಿನಲ್ಲಿ 13, ಚನ್ನಗಿರಿ ತಾಲೂಕಿನಲ್ಲಿ 9, ಹರಿಹರ ತಾಲೂಕಿನಲ್ಲಿ 7, ಜಗಳೂರು ತಾಲೂಕಿನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಇನ್ನು ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದ ಶ್ರೀಪಟೇಲ್ ಗುರುಬಸಪ್ಪ ಪ್ರೌಢಶಾಲೆಯ ಒಬ್ಬ ಶಿಕ್ಷಕ ಹಾಗೂ ಐವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಗೆ ರಜೆ ಘೋಷಿಸಲಾಗಿದೆ. ರೋಗ ಲಕ್ಷಣಗಳುಳ್ಳ 25 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

Comments