ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಕುರಗೋಡು ತಾಲೂಕಿನ ಯರಂಗನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ವಸತಿ ಶಾಲೆಯ 236 ವಿದ್ಯಾರ್ಥಿಗಳ ಪೈಕಿ 35 ವಿದ್ಯಾರ್ಥಿನಿಯರು, 11 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸದ್ಯ ಸೋಂಕಿತ ವಿದ್ಯಾರ್ಥಿಗಳನ್ನು ವಸತಿ ನಿಲಯದಲ್ಲಿಯೇ ಕ್ವಾರಂಟೈನ್ ಮಾಡಲಾಗಿದ್ದು, ಮುಂಜಾಗ್ರತ ಕ್ರಮವಾಗಿ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ.

Comments