ಅರ್ಜಿ ಸಲ್ಲಿಸಬಯಸುವವರು ಖಾಲಿ ನಿವೇಶನ ಹೊಂದಿರಬೇಕು, ಜಗಳೂರು ಪಟ್ಟಣದ ನಿವಾಸಿಯಾಗಿರಬೇಕು, 2 ಪಾಸ್‍ಪೋರ್ಟ್ ಪೋಟೋ, ಕುಟುಂಬ ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ತಹಶೀಲ್ದಾರ್ ಅವರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನಿವೇಶನ ಖಾತೆ ನಕಲು (ಕೆ.ಎಂ.ಎಫ್ ನಮೂನೆ-3) ಪ್ರತಿಗಳನ್ನು ಹಾಗೂ ತನ್ನ ಹೆಸರಿನಲ್ಲಿ ಈಗಾಗಲೇ ಪಕ್ಕಾ ಮನೆ ಇಲ್ಲವೆಂದು 20/- ಛಾಪಾ ಕಾಗದದಲ್ಲಿ ಪ್ರಮಾಣಪತ್ರವನ್ನು ಜಗಳೂರು ಪಟ್ಟಣದ ಪಂಚಾಯಿತಿಯ ಆಶ್ರಯ ಶಾಖೆಗೆ ಸಲ್ಲಿಸಬೇಕು ಎಂದು ಜಗಳೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

 


ಮಂಗಳೂರು: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ದೃಷ್ಟಿಯಿಂದ ದ.ಕ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಸಿದ್ಧಗೊಳಿಸಿದೆ.

ಶಾಲೆಗಳಲ್ಲಿ ಆವಶ್ಯಕತೆಗೆ ಅನುಗುಣವಾಗಿ ಪ್ರತೀ ತರಗತಿಯ ಅವಧಿಯನ್ನು 1 ಗಂಟೆ ವಿಸ್ತರಿಸಲು ಶಾಲಾ ಹಂತದಲ್ಲಿ ಕ್ರಮ ಕೈಗೊಳ್ಳಲು /ವೇಳಾಪಟ್ಟಿ ತಯಾರಿಸಲು ಅವಕಾಶ ಕಲ್ಪಿಸುವ ಬಗ್ಗೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಮಂಗಳೂರು: ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ದೃಷ್ಟಿಯಿಂದ ದ.ಕ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಸಿದ್ಧಗೊಳಿಸಿದೆ.

ಶಾಲೆಗಳಲ್ಲಿ ಆವಶ್ಯಕತೆಗೆ ಅನುಗುಣವಾಗಿ ಪ್ರತೀ ತರಗತಿಯ ಅವಧಿಯನ್ನು 1 ಗಂಟೆ ವಿಸ್ತರಿಸಲು ಶಾಲಾ ಹಂತದಲ್ಲಿ ಕ್ರಮ ಕೈಗೊಳ್ಳಲು /ವೇಳಾಪಟ್ಟಿ ತಯಾರಿಸಲು ಅವಕಾಶ ಕಲ್ಪಿಸುವ ಬಗ್ಗೆ ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಶಿಕ್ಷಕರ ಸಹಾಯವಾಣಿ
ಮಕ್ಕಳು ಹಾಗೂ ಶಿಕ್ಷಕರಿಗೆ ಸಹಾಯವಾಗುವಂತೆ ಸಂಪನ್ಮೂಲ ಶಿಕ್ಷಕರ ಸಹಾಯವಾಣಿ ಕೆಲವೇ ದಿನಗಳಲ್ಲಿ ಆರಂಭಿಸಲಾಗುತ್ತದೆ. ಆಕಾಶವಾಣಿ ಮೂಲಕ ವಿದ್ಯಾರ್ಥಿಗಳು-ಪೋಷಕರಿಗೆ ಎಸೆಸೆಲ್ಸಿ ಪರೀûಾ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಪೂರಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಅಲ್ಪಸಂಖ್ಯಾಕ ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳ ಫಲಿತಾಂಶವನ್ನು ಗಣನೀಯವಾಗಿ ಹೆಚ್ಚಿಸಲು ಸ್ವಯಂಸೇವಾ ಸಂಘಟನೆಗಳು ಹಾಗೂ ಸಮುದಾಯ ಮುಖಂಡರ ಸಹಾಯ ಪಡೆಯಲಾಗುತ್ತದೆ.

ಸ್ವಚ್ಛತೆಯ ಜತೆಗೆ ಪರೀಕ್ಷೆ
ಅನೌನ್ಸ್‌ಮೆಂಟ್‌!
ನಗರ ಹಾಗೂ ಗ್ರಾ.ಪಂ.ಗಳಲ್ಲಿ ಸ್ವಚ್ಛತೆಗೆ ಸಂಬಂಧಿಸಿದಂತೆ ಧ್ವನಿವರ್ಧಕ ಮೂಲಕ ಮಾಹಿತಿ ಕೊಡಲಾಗುತ್ತಿದೆ. ಜತೆಗೆ ಎಸೆಸೆಲ್ಸಿ ಪರೀಕ್ಷೆಯ ಬಗ್ಗೆ ಹೆಚ್ಚಿನ ಗಮನಹರಿಸುವಂತೆ ಪೋಷಕರು ಹಾಗೂ ಸಾರ್ವಜನಿಕರಿಗೆ ಕರೆ ನೀಡಲು ಇಲಾಖೆ ಚಿಂತಿಸಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.

ತರೆದ ಪುಸ್ತಕ ಪರೀಕ್ಷೆ !
ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ತಯಾರಿಸಲಾದ ಪ್ರಶ್ನೆಪತ್ರಿಕೆಗಳನ್ನು ಬಳಸಿ ಮೂರು ಪೂರ್ವಸಿದ್ಧತಾ ಪರೀಕ್ಷೆಗಳನ್ನು ಫೆಬ್ರವರಿ ಅಂತ್ಯದೊಳಗೆ ನಡೆಸಲು ಸೂಚಿಸಲಾಗಿದೆ. ಇದಕ್ಕಾಗಿ ಎಲ್ಲ ಶಿಕ್ಷಕರು ತಮ್ಮ ವಿಷಯಗಳಲ್ಲಿ ಪ್ರತೀ ವಾರ ತೆರೆದ ಪುಸ್ತಕಗಳ ಪರೀಕ್ಷೆ ನಡೆಸಬೇಕಾಗಿದೆ. ಈ ಮೂಲಕ ಮಕ್ಕಳಲ್ಲಿ ಓದುವ ಮತ್ತು ಬರೆಯುವ ಸಾಮರ್ಥ್ಯ ಹೆಚ್ಚಿಸಲಾಗುವುದು.

ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್‌
ಪ್ರತೀ ಶಾಲೆಯಲ್ಲಿರುವ ಕೌನ್ಸೆಲಿಂಗ್‌ ವ್ಯವಸ್ಥೆಯನ್ನು ಸಕ್ರಿಯಗೊಳಿಸಲಾಗುವುದು. ಸ್ವಯಂಸೇವಾ ಸಂಘಟನೆಗಳ ಸಹಾಯದಿಂದ ಮಕ್ಕಳು ಹಾಗೂ ಶಿಕ್ಷಕರಲ್ಲಿ ಧನಾತ್ಮಕ ಮನೋ ಭಾವ ಬೆಳೆಸುವುದು ಕೌನ್ಸಲಿಂಗ್‌ ಉದ್ದೇಶ. ಪ್ರತೀ ಶಾಲೆಯ ಶಿಕ್ಷಕರು ಹಾಗೂ ಮುಖ್ಯಶಿಕ್ಷಕರು ಫಲಿತಾಂಶ ವರ್ಧನೆಗೆ ಸೂಕ್ತ ಯೋಜನೆಯನ್ನು ರೂಪಿಸಿ ಅನುಷ್ಠಾನಕ್ಕೆ ತರುವಂತೆ ಡಿಡಿಪಿಐ ಸುಧಾಕರ ಕೆ. ಸೂಚಿಸಿದ್ದಾರೆ.

Comments