Uncategorized

ಧಾರವಾಡ: ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ; ಹೆಬ್ಬಳ್ಳಿ ಶಾಲೆ ಸೀಲ್ ಡೌನ್

 

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ. ತಾಲೂಕಿನ ಹೆಬ್ಬಳ್ಳಿ ಗ್ರಾಮದ ಶಾಲೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೋವಿಡ್ -19 ಸೋಂಕು ಕಾಣಿಸಿಕೊಂಡಿದೆ.

ಇಲ್ಲಿನ ನೆಹರು ಸಂಯುಕ್ತ ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿನ ಇಬ್ಬರು ವಿದ್ಯಾರ್ಥಿಗಳಿಗೆ ಜನವರಿ 24 ರಂದು ಸೋಂಕು ಕಾಣಿಸಿಕೊಂಡಿತ್ತು.

ಬಳಿಕ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಿದಾಗ ಒಟ್ಟಾರೇ 18 ವಿದ್ಯಾರ್ಥಿಗಳಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಇದರಿಂದ ಗ್ರಾಮದಲ್ಲಿ ಆತಂಕ ಹೆಚ್ಚಿದೆ.

18 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಾಕಿ ಇರುವ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಾಗಿದ್ದು, ಇಂದು ವರದಿ ಬರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಹೆಬ್ಬಳ್ಳಿ ಶಾಲೆಯನ್ನು ಸೀಲ್ ಡೌನ್ ಮಾಡಿದೆ.

ಈ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಮಾಹಿತಿ ಕಳುಹಿಸಿರುವ ಪ್ರಾಂಶುಪಾಲರು, ಸರ್ಕಾರದ ನಿರ್ದೇಶನ ಮತ್ತು ತಹಸೀಲ್ದಾರರ ಮಾಹಿತಿಯಂತೆ ಇಂದಿನಿಂದ ಫೆಬ್ರವರಿ 2 ರವರೆಗೆ ಶಾಲೆಗೆ ರಜೆ ನೀಡಲಾಗಿದೆ. ಅಲ್ಲದೇ ಭೌತಿಕ ಶಿಕ್ಷಣಕ್ಕೆ ರಜೆ ನೀಡಲಾಗಿದ್ದು, ಆನ್ ಲೈನ್ ತರಗತಿಗಳಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Leave a Reply

Your email address will not be published.